ಬಿಜೆಪಿ ಗೆಲವು ಖಚಿತ: ವಿಶ್ವಾಸ
ಕಡೂರು: ಬರುವ ಚುನಾವಣೆಯಲ್ಲಿ ಕಡೂರು ಬೀರೂರು ಸೇರಿದಂತೆ ಜಿಲ್ಲೆಯ ನಗರಸಭೆ, 3 ಪುರಸಭೆ ಹಾಗೂ 2 ಪಟ್ಟಣ ಪಂಚಾಯ್ತಿಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನುಪ್ರಕಾಶ್ ವಿಶ್ವಾಸ ವ್ಯಕ್ತಪಡಿಸಿದರು.
ಕಡೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದಿನ ಯಾವ ಸರ್ಕಾರಗಳೂ ನೀಡದಿರುವಷ್ಟು ಅನುದಾನ ನೀಡಿ, ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿರುವುದು ಭಾರತೀಯ ಜನತಾಪಕ್ಷವು ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಗೆಲುವು ಸಾಧಿಸಲು ಅನುಕೂಲವಾಗಲಿದೆ ಎಂದರು.
ಮೂಲ ಸವಲತ್ತು: ಪುರಸಭೆ, ನಗರಸಭೆ ಸೇರಿದಂತೆ ಪಟ್ಟಣ ಪಂಚಾಯ್ತಿಗಳಿಗೆ ಬಿಜೆಪಿ ಸರ್ಕಾರ ಕೋಟ್ಯಂತರ ರೂ. ಅನುದಾನ ನೀಡಿ ಮೂಲ ಸವಲತ್ತುಗಳಾದ ರಸ್ತೆ, ಚರಂಡಿ, ಬೀದೀದೀಪ, ನೀರನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮೂಡಿಗೆರೆ, ಕಡೂರು, ಬೀರೂರು, ಶೃಂಗೇರಿಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ವಿಪ ಸದಸ್ಯ ಗಣೇಶ್ ಕಾರ್ಣಿಕ್ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ರು. 400 ಕೋಟಿ ರೂ. ಸ್ಥಳೀಯ ಸಂಸ್ಥೆಗಳ ಮೂಲ ಸವಲತ್ತುಗಳಿಗೆ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.
ಪಕ್ಷದ ಶಾಸಕರು ಹಾಗೂ ಸರ್ಕಾರ ಮಾಡಿರುವ ಅಭಿವೃದ್ಧಿ ಸಾಧನೆಯ ಮಾನದಂಡವನ್ನು ಜನರ ಬಳಿಗೆ ತೆರಳಿ ಮತಕೇಳುವ ಮೂಲಕ ಬಿಜೆಪಿ ಗೆಲವಿಗೆ ಪಕ್ಷವು ಎಲ್ಲ ರೀತಿಯಲ್ಲೂ ಸಜ್ಜಾಗಿದೆ ಎಂದರು.
ಶಾಸಕ ಡಾ ವೈ.ಸಿ. ವಿಶ್ವನಾಥ್, ಪಕ್ಷದ ತಾಲೂಕು ಅಧ್ಯಕ್ಷ ಕೆ.ಎಚ್.ಎ. ಪ್ರಸನ್ನ, ಉಪಾಧ್ಯಕ್ಷ ಎ. ಮಣಿ, ಮುಖಂಡ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

