ಸರ್ವ ಸದಸ್ಯರ ಸಭೆ
ನರಸಿಂಹರಾಜಪುರ: ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯ ಶೃಂಕೋನ ಮಾಜಿ ಸೈನಿಕರ ಸಂಘದ ಸರ್ವ ಸದಸ್ಯರ ಸಭೆ ಸಂಘದ ಅಧ್ಯಕ್ಷ ನಿಲುವಾಗಿಲು ವಿಜಯ ಅವರ ಅಧ್ಯಕ್ಷತೆಯಲ್ಲಿ ಫೆ.24ರ ಭಾನುವಾರ ಕೊಪ್ಪದ ಟೌನ್ಹಾಲ್ನಲ್ಲಿ ಮದ್ಯಾಹ್ನ 2.30 ಗಂಟೆಗೆ ನಡೆಯಲಿದೆ ಎಂದು ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಮುತ್ತಿನಕೊಪ್ಪ ಯತಿರಾಜ್ ತಿಳಿಸಿದ್ದಾರೆ.
ಈ ಸಭೆಗೆ ರಾಜ್ಯ ಮಟ್ಟದ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಸಭೆಗೆ ಮೂರೂ ತಾಲೂಕುಗಳ ಮಾಜಿ ಸೈನಿಕರು ಆಗಮಿಸಬೇಕು ಎಂದು ಯತಿರಾಜ್ ಮನವಿ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿ ಚುನಾವಣೆಗೆ ಶುಕ್ರವಾರ ನಾಮಪತ್ರಗಳ ಮಹಾಪೂರವೇ ಹರಿದು ಬಂದಿದ್ದು ಒಂದೇ ದಿನ 27 ನಾಮಪತ್ರ ಸಲ್ಲಿಕೆ ಆಗಿದೆ. ಇದರಲ್ಲಿ ಬಿಜೆಪಿ ಪಕ್ಷ 11 ನಾಮಪತ್ರ, ಜೆಡಿಎಸ್ 7, ಕಾಂಗ್ರೆಸ್ 6 ನಾಮಪತ್ರ ಹಾಗೂ ಪಕ್ಷೇತರರು 3 ನಾಮಪತ್ರ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

