ಚಿಕ್ಕಮಗಳೂರು

ಶಿಕ್ಷಣ ಗ್ರಾಮೀಣ ಪ್ರದೇಶದವರೆಗೆ ತಲುಪಿಸಲು ಪ್ರಯತ್ನ

Published On :

ಕೊಪ್ಪ: ಶೃಂಗೇರಿ ಕ್ಷೇತ್ರದಾದ್ಯಂತ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯ ಒದಗಿಸುವ ಮೂಲಕ ಉತ್ತಮ ಶಿಕ್ಷಣವನ್ನು ಗ್ರಾಮೀಣ ಪ್ರದೇಶದವರೆಗೆ ತಲುಪಿಸಲು ಕೃಷ್ಣ ಫೌಂಡೇಶನ್ ಶ್ರಮಿಸಲಿದೆ ಎಂದು ಫೌಂಡೇಶನ್ ಅಧ್ಯಕ್ಷರಾದ ಆರತಿ ಕೃಷ್ಣ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಈಗಾಗಲೇ ಶೃಂಗೇರಿ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಅಗತ್ಯವಿರುವ ಸಮವಸ್ತ್ರ, ಊಟದ ತಟ್ಟೆ, ಕಲಿಕಾ ಸಾಮಾಗ್ರಿ ಹಾಗೂ ರಂಗಮಂದಿರ ನಿರ್ಮಾಣಕ್ಕೆ ಹಣ ಸಹಾಯ ಸೇರಿದಂತೆ ರು. 17 ಲಕ್ಷ ಕ್ಕೂ ಹೆಚ್ಚು ವೆಚ್ಚ ಮಾಡಿ, ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಫೌಂಡೇಶನ್ ಪ್ರಯತ್ನ ಮಾಡುತ್ತಿದೆ ಎಂದರು.
ಸಾಗಣೆ ವೆಚ್ಚ: ಶೃಂಗೇರಿಯ ಶಾರದಾ ಪೀಠದದಿಂದ ಮಧ್ಯಾಹ್ನದ ಬಿಸಿಯೂಟವನ್ನು ಶಾರದಾ ಪ್ರಸಾದ ರೂಪದಲ್ಲಿ ಕೊಪ್ಪ ಮತ್ತು ಶೃಂಗೇರಿ ತಾಲೂಕಿನ 34 ಶಾಲೆಗಳಿಗೆ ಉಚಿತವಾಗಿ ನೀಡುತ್ತಿದ್ದು, ಇದರ ಸಾಗಣೆ ವೆಚ್ಚವನ್ನು ಶಾಲೆಗಳೇ  ನೀಡಬೇಕಾದ್ದರಿಂದ ಸರ್ಕಾರವೇ ಭರಿಸುವಂತೆ ಶಿಕ್ಷಣ ಮಂತ್ರಿಗಳಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದರು.
ಈ ಸಾಗಣೆ ವೆಚ್ಚ ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರವೇ ಭರಿಸಿ ಕೊಡುತ್ತದೆ ಎಂದು ಶಿಕ್ಷಣ ಮಂತ್ರಿ ಕಾಗೇರಿಯವರು ಭರವಸೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.