ಶಿಬಿರಗಳಿಂದ ಕೃಷಿ ಸಂಸ್ಕೃತಿ ದರ್ಶನ
ನರಸಿಂಹರಾಜಪುರ: ಎನ್ಎನ್ಎಸ್ ಶಿಬಿರದಿಂದ ಶಿಬಿರಾರ್ಥಿಗಳಿಗೆ ಕೃಷಿ ಸಂಸ್ಕೃತಿಯ ದರ್ಶನವಾಗುತ್ತದೆ ಎಂದು ಕೊಪ್ಪ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಸಿ. ವೆಂಕಟೇಶ್ ತಿಳಿಸಿದರು.
ತಾಲೂಕಿನ ಕಮಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಹಮ್ಮಿಕೊಂಡಿದ್ದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಬಿರದಲ್ಲಿ ಶಿಬಿರಾರ್ಥಿಗಳು ಕ್ರಿಯಾತ್ಮಕವಾಗಿ ಭಾಗವಹಿಸಿ ಗ್ರಾಮೀಣ ಭಾಗದ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ತಾಲೂಕು ಬಗರ್ ಹುಕುಂ ಸಮಿತಿಯ ಸದಸ್ಯ ವೈ.ಎಸ್. ಗಣೇಶ್ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಶಿಕ್ಷಣ ಪಡೆಯುತ್ತಿರುವ ಶಿಬಿರಾರ್ಥಿಗಳು ಶಿಬಿರದ ಮೂಲಕ ಗ್ರಾಮದ ಜನ ಜೀವನ ತಿಳಿದುಕೊಳ್ಳಬೇಕು ಎಂದರು. ಪ್ರಾಧ್ಯಾಪಕ ಡಾ.ಟಿ. ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಸಮುದಾಯ ಸೇವೆ ಮಾಡಬೇಕು. 7 ದಿನ ನಡೆಯುವ ಶಿಬಿರದಲ್ಲಿ ಪ್ರತಿದಿನ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ, ಮಾಹಿತಿ, ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದರು.
ಸೀತೂರು ಗ್ರಾಪಂ ಉಪಾಧ್ಯಕ್ಷ ಬಾಬು ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸೀತೂರು ಗ್ರಾಪಂ ಸದಸ್ಯ ಎನ್.ಪಿ. ರಮೇಶ್, ರಜನಿ ರಮೇಶ್, ಎ.ಎಸ್. ವೆಂಕಟರಮಣ, ವೈ.ಕೆ.ಶ್ರೀನಿವಾಸ, ಶ್ರೀಧರ, ಸತೀಶ್ನಾಯಕ್, ಪ್ರಮೀಳಾ, ಎಸ್.ಎ.ನರಸಿಂಹ, ಎ.ಸಿ. ಪುಟ್ಟಸ್ವಾಮಿ, ಎಂ.ಕೆ. ಮಮತ ಇದ್ದರು.
ಶಿಬಿರಾರ್ಥಿಗಳು ಕಮಾಲಾಪುರ ಗ್ರಾಮದ ಮುಖ್ಯ ಬೀದಿಯಲ್ಲಿ ಏಡ್ಸ್ ಅರಿವು ಮೂಡಿಸುವ ಜಾಥಾ ನಡೆಸಿದರು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

