ಕೊಲೆಗೆ ಯತ್ನ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ
ಚಿಕ್ಕಮಗಳೂರು: ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಆರೋಪಿಗೆ ಜಿಲ್ಲಾ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
2011ರ ಜೂನ್ 12 ರಂದು ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಶಿಗರ ಗ್ರಾಮದ ಚಿಮ್ಮಟಗೆರೆ ನಿವಾಸಿ ಎಚ್. ಕುಮಾರ್ ಎಂಬುವರು ತನ್ನ ಮನೆಯ ಹಿಂಭಾಗದ ಗೊಬ್ಬರದ ಗುಂಡಿಗೆ ಪಕ್ಕದ ಮನೆಯ ದಿನೇಶ್ ಎಂಬಾತನು ನೀರು ಬೀಡುತ್ತಿದ್ದನ್ನು ಕಂಡು ನೀರು ಬಿಡದಿರುವಂತೆ ತಿಳಿಸಿದ್ದರು. ಜಮೀನು ವಿಚಾರದಲ್ಲಿ ಕುಮಾರ್ ಅವರೊಂದಿಗೆ ದ್ವೇಷ ಹೊಂದಿದ್ದ ದಿನೇಶ್, ಈ ಸಂದರ್ಭದಲ್ಲಿ ಅವರನ್ನು ಏಕಾಏಕಿ ನಿಂದಿಸಿ, ಅಟ್ಟಿಸಿಕೊಂಡು ಹೋಗಿ ಕತ್ತಿಯಿಂದ ಕುತ್ತಿಗೆಗೆ ಮತ್ತು ಕೈಗೆ ಕಡಿದು, ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಿ.ಎ. ಪಾಟೀಲ್ ಅವರು, ಆರೋಪಿ ದಿನೇಶ್ಗೆ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ. ದಂಡದ ಹಣದಲ್ಲಿ 20 ಸಾವಿರ ನೊಂದ ಕುಮಾರ್ಗೆ ಪರಿಹಾರ ನೀಡಲು ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ವಿ.ಆರ್. ಉಪಾಧ್ಯೆ ಮೊಕದ್ದಮೆಯನ್ನು ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

