ಚುನಾವಣೆ: ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಾಮಪತ್ರ ಸಲ್ಲಿಕೆ
ಹೊಳಲ್ಕೆರೆ: ಪಟ್ಟಣ ಪಂಚಾಯಿತಿಯ ಚುನಾವಣಾ ಅರ್ಜಿ ಸಲ್ಲಿಕೆ ಅಂತಿಮ ದಿನವಾದ 23ರಂದು ಶನಿವಾರ ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಹಲವಾರು ಪಕ್ಷೇತರರು 15 ವಾರ್ಡ್ಗಳಿಗೆ ಅರ್ಜಿ ಸಲ್ಲಿಸಿದರು.
ಕೆಜೆಪಿ ಅಭ್ಯರ್ಥಿಗಳ ಪರವಾಗಿ ಮಾಜಿ ಶಾಸಕ ಎಂ. ಚಂದ್ರಪ್ಪ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಎಚ್. ಆಂಜನೇಯ, ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಅಧ್ಯಕ್ಷ ಪಿ.ಆರ್. ಶಿವಕುಮಾರ್, ಜೆಡಿಎಸ್ ಪಕ್ಷದ ಅಧ್ಯಕ್ಷ ಜೆ.ಬಿ. ಶೇಖರ್, ಬಿ.ಎಸ್.ಆರ್ ಕಾಂಗ್ರೆಸ್ ಪಕ್ಷದ ಮುಖಂಡ ಶ್ರೀನಿವಾಸ್ ಹಾಜರಿದ್ದರು.
ಕೆಜೆಪಿ, ಕಾಂಗ್ರೆಸ್, ಬಿಜೆಪಿ, ಬಿಎಸ್ಆರ್ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಪ್ರತ್ಯೇಕವಾಗಿ ಮುಖ್ಯರಸ್ತೆ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರಗಳನ್ನು ಸಲ್ಲಿಸಿದರು. ಆಯಾ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಚುನಾವಣೆಯ ಅಂತಿಮವಾಗಿ ಎಷ್ಟು ಅಭ್ಯರ್ಥಿಗಳ ನಾಮಪತ್ರ ಸ್ವೀಕೃತಗೊಂಡು ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರ ಫೆ.27ರಂದು ಗೊತ್ತ್ತಾಗಲಿದೆ.
ನಿಷ್ಟಾವಂತರಿಗೆ ಮಾತ್ರ ಟಿಕೆಟ್ ನೀಡಿ
ಹೊಳಲ್ಕೆರೆ: ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೊಳಲ್ಕೆರೆ ಪಟ್ಟಣ ಪಂಚಾಯಿತಿ 15 ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇತುರಾಮ್ ಕರೆ ನೀಡಿದರು. ಪಟ್ಟಣ ಪಂಚಾಯಿತಿ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಕಚೇರಿ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಮಾತ್ರ ಟಿಕೆಟ್ ನೀಡಿ ಸಾಮಾಜಿಕ ನ್ಯಾಯ ಕಾಪಾಡಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕರ್ತರು ಶ್ರಮಿಸಿ: ಮಾಜಿ ಶಾಸಕ ಎಚ್. ಆಂಜನೇಯ ಮಾತನಾಡಿ, ಕಾಂಗ್ರೆಸ್ ಬಡವರ ಪಕ್ಷ. ಜನರು ಎಂದಿಗೂ ಕೈಬಿಟಿಲ್ಲ. ಹೊಳಲ್ಕೆರೆ ತಾಲೂಕು ಕಾಂಗ್ರೆಸ್ ಭದ್ರ ಕೋಟೆಯಾಗಿದೆ. ಮಾ.7ರಂದು ನಡೆಯುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ 15 ಅಭ್ಯರ್ಥಿಗಳನ್ನು ಗೆಲ್ಲಿಸಿ ಅಡಳಿತವನ್ನು ತಮ್ಮದಾಗಿ ಮಾಡಿಕೊಳ್ಳಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕೆಂದು ತಿಳಿಸಿದರು.
ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಎಸ್. ರುದ್ರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಪಂ ಸದಸ್ಯರಾದ ಪಾರ್ವತಮ್ಮ, ಭಾರತಿಕಲ್ಲೇಶ್, ಇಂದಿರಾಕಿರಣ್, ರಂಗಸ್ವಾಮಿ, ಪಪಂ ಅಧ್ಯಕ್ಷ ಗೀತಾಕೃಷ್ಣಮೂರ್ತಿ, ಮುಖಂಡರಾದ ಬಿ. ಗಂಗಾಧರ್, ಲೋಹಿತ್ಕುಮಾರ್, ತಿಮ್ಮಣ್ಣ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

