ಚಿಕ್ಕಮಗಳೂರು

ನಾಮಪತ್ರ: ನೂಕುನುಗ್ಗಲು

Published On :

ಮೊಳಕಾಲ್ಮುರು: ಪಟ್ಟಣ ಪಂಚಾಯ್ತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಶನಿವಾರ ನಾಮ ಪತ್ರ ಸಲ್ಲಿಸುವಂತಹ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಗಿ ನಾಮಪತ್ರ ಸಲ್ಲಿಸುವುದಕ್ಕಾಗಿ ಸರತಿ ಸಾಲಿನಲ್ಲಿ ಕಾಯುವಂತಾಗಿತ್ತು.
ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರುಗಳು ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿ ನಾಮಪತ್ರ ಸಲ್ಲಿಸುವಂತಹ ಸಂದರ್ಭದಲ್ಲಿ ಜೊತೆಯಲ್ಲಿದ್ದು, ಪಕ್ಷದಿಂದ ಸ್ಪರ್ಧೆ ಬಯಸಿದ ಬಹುತೇಕ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ ಪಟಾಕಿ  ಸಿಡಿಸಿ ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವುದು ಕಂಡು ಬಂತು. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಅಲ್ಲದೆ ಬಿಎಸ್‌ಆರ್ ಪಕ್ಷಗಳ ಮುಖಂಡರ ಒಡಾಟದಿಂದ ಭರ್ಜರಿ ರಾಜಕೀಯ ರಂಗು ಕಂಡು ಬರುತಿತ್ತು.
ಕೆಲವರ ನಿರಾಸೆ: ಪ್ರಮುಖವಾಗಿ ಕಳೆದ ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಕೆಲವು ಮುಖಂಡರು ಈ ಬಾರಿ ಬಿಎಸ್‌ಆರ್ ಪಕ್ಷಕ್ಕೆ ಪಕ್ಷಾಂತರ ಮಾಡಿದ್ದು, ಬಿಎಸ್‌ಆರ್ ಪಕ್ಷವು ಹೆಚ್ಚಿನ ಪ್ರಚಾರ ಗಿಟ್ಟಿಸಲು ಕಾರಣವಾಗುತ್ತಿದೆ. ಬಿಜೆಪಿ ಪಕ್ಷದಲ್ಲಿ ಬಹುತೇಕ ಹೊಸ ಮುಖಗಳು ಸ್ಪರ್ಧೆ ಬಯಸಿ ನಾಮ ಪತ್ರ ಸಲ್ಲಿಸಿರುವುದು ವಿಶೇಷವಾಗಿ ಕಂಡು ಬರುತ್ತಿದ್ದು, ಕೆಲವು ರಾಜಕೀಯ ಪಕ್ಷದಲ್ಲಿ ಟಿಕೆಟ್ ಗಿಟ್ಟಿಸಲು ಪ್ರಯತ್ನಿಸಿದ ಕೆಲ ಅಕಾಂಕ್ಷಿಗಳಿಗೆ ಕೊನೆ ಗಳಿಗೆಯಲ್ಲಿ ಟಿಕೆಟ್ ದೊರೆಯದೆ ಇರುವುದರಿಂದ ಕೆಲವರಲ್ಲಿ ನಿರಾಸೆಯು ಕಂಡು ಬಂತು. ಒಟ್ಟಾರೆಯಾಗಿ ಕುತೂಹಲ ಮೂಡಿಸಿರುವ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬಹುಮತ ಲಭಿಸುತ್ತದೆ ಎನ್ನುವುದು ಕಾದು ನೋಡಬೇಕಾಗಿದೆ.  
ಮೊಳಕಾಲ್ಮುರು 78 ನಾಮಪತ್ರ: ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಶನಿವಾರ ಒಟ್ಟು 78 ನಾಮ ಪತ್ರ ಸಲ್ಲಿಕೆಯಾಗಿವೆ. ಅದರಲ್ಲಿ ಕಾಂಗ್ರೆಸ್ 16, ಬಿಜೆಪಿ 5, ಪಕ್ಷೇತರ 23, ಜೆಡಿಎಸ್ 12, ಬಿಎಸ್‌ಆರ್ 20, ಕೆಜಿಪಿ 2, ನಾಮಪತ್ರಗಳು ಸಲ್ಲಿಕೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.