ಮಾ. 24ರಂದು ಜಿಲ್ಲಾ ಮಾಧ್ಯಮ ಸಮ್ಮೇಳನ
ಚಿಕ್ಕಮಗಳೂರು: ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ಮಾರ್ಚ್ 24 ರಂದು ಬಾಳೆಹೊನ್ನೂರಿನ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನಪೀಠದಲ್ಲಿ ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಸಮ್ಮೇಳನವನ್ನು ಆಯೋಜಿಸಿದೆ.
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಮಾರ್ಚ್ 23 ರಿಂದ 29ರವರೆಗೆ ನಡೆಯುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಂದರ್ಭದಲ್ಲಿ ಈ ವರ್ಷ ವಿಶೇಷವಾಗಿ ಮಾರ್ಚ್ 24 ರಂದು ಮಾಧ್ಯಮ ಸಮ್ಮೇಳನ ನಡೆಯಲಿದ್ದು, ಪ್ರಸನ್ನ ವೀರಸೋಮೇಶ್ವರ ಶಿವಾಚಾರ್ಯ ಶ್ರೀ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ ತಿಳಿಸಿದ್ದಾರೆ.
ಮಹಿಳಾರತ್ನ ಪ್ರಶಸ್ತಿ: ಮಾಧ್ಯಮಕ್ಕೆ ಸೀಮಿತವಾಗಿ ಪ್ರತಿಷ್ಠಾನವು ಜಿಲ್ಲೆಯಲ್ಲಿ ಸ್ಥಾಪಿಸಿರುವ ಪ್ರಶಸ್ತಿಯಾದ ಚಿಕ್ಕೊಳಲೆ ಸದಾಶಿವಶಾಸ್ತ್ರಿ ಪತ್ರಿಕೋದ್ಯಮ ಪ್ರಶಸ್ತಿ ಜೊತೆಗೆ ಪ್ರಭು ನ್ಯೂಬ್ಯೂರೋ ಸಾಧಕ ಮಹಿಳೆಯರಿಗೆ ಕೊಡ ಮಾಡುವ ಶ್ರೀಮತಿ ಸುವರ್ಣಾ ಮಹಿಳಾರತ್ನ ಪ್ರಶಸ್ತಿಯನ್ನು ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಪುರಸ್ಕೃತರು ಹಾಗೂ ಸಮ್ಮೇಳನಾಧ್ಯಕ್ಷರನ್ನು ಆರಿಸುವ ಪ್ರಕ್ರಿಯೆಗಳು ಶ್ರೀಗಳ ಮಾರ್ಗದರ್ಶನದಲ್ಲಿ ನಡೆದಿದೆ.
ಜಿಲ್ಲೆಯ ಪತ್ರಕರ್ತರ ಸಮಸ್ಯೆ ಪರಿಹಾರ ಕುರಿತಂತೆ ಚರ್ಚಿಸಿ, ಯೋಜನೆ ರೂಪಿಸುವ ಉದ್ದೇಶವಿದೆ. ಈ ಸಮ್ಮೇಳನವನ್ನು ಜಿಲ್ಲೆಯ ಇತಿಹಾಸದಲ್ಲಿ ದಾಖಲಾಗುವಂತೆ ಅರ್ಥರ್ಪೂರ್ರ್ಣವಾಗಿ ಸಂಘಟಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿ ಚಿಂತನ- ಮಂಥನದ ಮೂಲಕ ಮೂಡಿಬಂದ ವಿಚಾರಗಳನ್ನು ಕಾರ್ಯಗತಗೊಳಿಸುವ ಹಿನ್ನೆಲೆಯಲ್ಲಿ ಮುಂದಿನ ಯೋಜನೆಯನ್ನೂ ರೂಪಿಸಲಾಗುವುದು. ಮಾಧ್ಯಮ ಮಿತ್ರರು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

