ಪೋಲಿಯೊ ಮುಕ್ತ ವಿಶ್ವ ನಮ್ಮಗುರಿ
ಕಡೂರು: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ, ರೋಟರಿ ಕ್ಲಬ್ ಮತ್ತು ಸರ್ಕಾರದ ಸಹಯೋಗದಲ್ಲಿ ನಡೆದ ದ್ವಿತೀಯ ಹಂತದ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ತಾಲೂಕಿನ ಸಾವಿರಾರು ಮಕ್ಕಳಿಗೆ ಲಸಿಕೆ ಹಾಕಲಾಯಿತು.
ಕಳೆದ ಬಾರಿ ನಡೆದ ಮೂದಲ ಹಂತದ ಪೋಲಿಯೊ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಶೇ. 96 ರಷ್ಟು ಪ್ರಗತಿ ಸಾಧಿಸಿತ್ತು. ತಾಲೂಕಿನಲ್ಲಿ ಯಶಸ್ವಿಯಾಗಿ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಸುವ ಮೂಲಕ 22 ವಲಸೆ ಜನಾಂಗಗಳ ಪ್ರದೇಶ ಗುರುತಿಸಿ ಆ ಕುಟುಂಬಗಳ 146 ಮಕ್ಕಳಿಗೆ ಲಸಿಕೆ ನೀಡಿತ್ತು.
ದೃಢ ನಿರ್ಧಾರ: ಆಸ್ಪತ್ರೆ ಮುಂಭಾಗ ಎರಡನೇ ಹಂತದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಚ್.ಎ. ಪ್ರಸನ್ನ ಮಾತನಾಡಿ, ರೋಟರಿ ಸಂಸ್ಥೆಯು ಸರ್ಕಾರಗಳ ಸಹಭಾಗಿತ್ವದಲ್ಲಿ ಇಡೀ ಪ್ರಪಂಚದಲ್ಲಿ ಹುಟ್ಟುವ ಮಕ್ಕಳನ್ನು ಪೋಲಿಯೊ ಮುಕ್ತರನ್ನಾಗಿ ಮಾಡಲು ದೃಢ ನಿರ್ಧಾರ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಜನರ ಸೇವೆಗೆ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ ಎಸ್.ಕೆ.ಪ್ರಭು ಮಾತನಾಡಿ, 2ನೇ ಹಂತದ ಪಲ್ಸ್ ಪೋಲಿಯೊ ಕಾರ್ಯಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದ್ದು 3.11 ಲಕ್ಷ ಜನಸಂಖ್ಯೆ ಇರುವ ತಾಲೂಕಿನಲ್ಲಿನ 76,189 ಕುಟುಂಬಗಳ 28,812 ಮಕ್ಕಳನ್ನು ಗುರುತಿಸಲಾಗಿದೆ. ಈ ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಮಕ್ಕಳಿಗೆ ಮುಂದೆ ಯಾವುದೇ ರೋಗ ಹರಡದಂತೆ ಆರೋಗ್ಯ ಇಲಾಖೆಯು ರೋಟರಿ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
152 ಬೂತ್: ಕಡೂರು ತಾಲೂಕಿನಲ್ಲಿ 152 ಬೂತ್ಗಳನ್ನು ಮಾಡಿ ಕಡೂರು ಪಟ್ಟಣದಲ್ಲಿ 18 ಬೂತ್ ಲಸಿಕೆ ಕೇಂದ್ರಗಳನ್ನು ಮಾಡಿ ಈ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಒಟ್ಟು 648 ಜನರು ಕಾರ್ಯ ನಿರ್ವಹಿಸಲಿದ್ದು, ತಲಾ ಇಬ್ಬರಂತೆ 304 ಟೀಮುಗಳನ್ನು ಮಾಡಲಾಗಿದೆ ಎಂದರು.
ಕಡೂರು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಪರಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ ತೀರ್ಥನಾಥ್, ರೋಟರಿ ಕ್ಲಬ್ ಪದಾಧಿಕಾರಿ ದ್ವಾರಕ ಬಾಬು, ಬಸವರಾಜಪ್ಪ, ಪುರಸಭೆ ಆರೋಗ್ಯ ನಿರೀಕ್ಷಕರಾದ ಹರೀಶ್ ಪಾಲ್ಗೊಂಡಿದ್ದರು.
ಶೃಂಗೇರಿ: ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಬೆಳಗ್ಗಿನಿಂದಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು.
ಪೋಲಿಯೋ ಲಸಿಕೆ
ತರೀಕೆರೆ: ರೋಟರಿ ಸಂಸ್ಥೆ, ಸಾರ್ವಜನಿಕ ಆಸ್ಪತ್ರೆ, ಪಲ್ಸ್ ಪೋಲಿಯೋ ಚಾಲನಾ ಸಮಿತಿಯಿಂದ ಭಾನುವಾರ ಪಟ್ಟಣದ ಸಾರ್ವಜಿನಿಕ ಆಸ್ಪತ್ರೆ ಆವರಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆ ಏರ್ಪಡಿಸಲಾಗಿತ್ತು. ಸಮಿತಿ ಅಧ್ಯಕ್ಷೆ, ಉಪ ವಿಭಾಗಾಧಿಕಾರಿ ಅನುರಾಧಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ರ ಡಾ.ಜಿ.ಸಿ. ಶರತ್, ಡಾ.ಎಸ್.ಎನ್. ಆಚಾರ್ಯ, ಡಾ.ಎಸ್. ಗಿರೀಶ್, ತಾಲೂಕು ವೈದ್ಯಾಧಿಕಾರಿ ಡಾ. ಗಣೇಶ್, ಡಾ. ಪ್ರವೀಣ್, ಕಾಂತರಾಜ್, ಕ್ರಿಸ್ತ ದಯಾ ಕುಮಾರ್ ಇದ್ದರು.
ನರಸಿಂಹರಾಜಪುರದಲ್ಲಿ..
ನರಸಿಂಹರಾಜಪುರ: ಈ ವರ್ಷದ 2 ನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಭಾನುವಾರ ಬಸ್ಸು ನಿಲ್ದಾಣದ ಆವರಣದಲ್ಲಿ ಜ್ವಾಲಾಮಾಲಿನಿ ಜೇಸಿ ಅದ್ಯಕ್ಷ ಎಸ್.ಎಸ್. ಶೇಷಗಿರಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ್, ವಿಶೇಷಾಧಿಕಾರಿ ಅಭಿನವ ಗಿರಿರಾಜ್, ಉಪಾಧ್ಯಕ್ಷ ಪುರಶೋತ್ತಮ್, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

