'11 ವಾರ್ಡ್‌ಗಳಿಗೂ ಕಾಂಗ್ರೆಸ್ ಕಣಕ್ಕೆ'
ಮೂಡಿಗೆರೆ: ಸದ್ಯದಲ್ಲೇ ಬರಲಿರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಈಗ ಬಂದಿರುವ ಪಟ್ಟಣ ಪಂಚಾಯಿತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆರಿಸಿ ಕಣಕ್ಕಿಳಿಸಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಜಿ.ಎಚ್. ಹಾಲಪ್ಪಗೌಡ ಹೇಳಿದ್ದಾರೆ.
ಪತ್ರಿಕೆಯೊಂದಿಗೆ ಪಟ್ಟಣ ಪಂಚಾಯಿತ್ ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿ, ಪಟ್ಟಣ ಪಂಚಾಯಿತ್‌ನ 11 ವಾರ್ಡ್‌ಗಳಿಗೂ 11 ಅಭ್ಯರ್ಥಿಗಳಿಗೂ ಬಿ ಫಾರಂ ನೀಡಿ ಕಣಕ್ಕಿಳಿಸಲಾಗಿದೆ ಎಂದರು.
ಆಡಳಿತ ಪಕ್ಷವಾದ ಬಿಜೆಪಿ ಪಟ್ಟಣ ಪಂಚಾಯಿತ್‌ನಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಮರೆತು ಸ್ವ ಅಭಿವೃದ್ಧಿ ಕಾರ್ಯದಲ್ಲೆ ಮುಳುಗುವುದರೊಂದಿಗೆ ಕಳಪೆ ಕಾಮಗಾರಿಗಳನ್ನು ಮಾಡುವುದರ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ತುಂಬಿದೆ. ಗಬ್ಬುನಾಥ ಹರಡಿಸುವುದರ ಮೂಲಕ ಸಾಂಕ್ರಾಮಿಕ ರೋಗಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿದ್ದ ಜೆಡಿಎಸ್ ಅಭ್ಯರ್ಥಿಗಳು ಇವರ ವರ್ತನೆಯಿಂದ ಬೇಸತ್ತು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಪಾದಾರ್ಪಣೆ ಮಾಡುವುದರ ಮೂಲಕ ಚುನಾವಣಾ ಕಣಕ್ಕಿಳಿದಿದ್ದಾರೆ.
ಬಿಜೆಪಿಯ ದುರಾಡಳಿತದಿಂದ ಬೇಸತ್ತ ಮತದಾರರು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ಗೆ ತಕ್ಕ ಪಾಠ ಕಲಿಸುವುದರೊಂದಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

