ಇಂದು ಶ್ರೀ ರೇಣುಕಾ ಯಲ್ಲಮ್ಮ ಜಾತ್ರೆ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಕಿಗ್ಗಾದ ಸಮೀಪದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರೇಣುಕಾ ಯಲ್ಲಮ್ಮ ಜಾತ್ರಾ ಮಹೋತ್ಸವ ಮಂಗಳವಾರ ನಡೆಯಲಿದೆ. ಬೆಳಿಗ್ಗೆಯಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು, ಪಂಚಾಮೃತ ಅಭಿಷೇಕ, ಹರಿದ್ರ ಸ್ನಾನ, ಸಹಸ್ರ ಕುಂಕುಮಾರ್ಚನೆ, ಗಂಗಾ ಪೂಜೆ ನೆರವೇರಲಿದೆ. ನಂತರ ವಿಜೃಂಭಣೆಯಿಂದ ರಥ ಬೀದಿ ಉತ್ಸವ ಜರುಗಲಿದೆ. ರಾತ್ರಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ.
ನಾಳೆ ಚಾಮುಂಡೇಶ್ವರಿ ಮಹೋತ್ಸವ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಯಡದಾಳು ಗ್ರಾಮದ ತೋರಣಗೆದ್ದೆ ಶ್ರೀ ಚಾಮುಂಡೇಶ್ವರಿ ದೇವಾಲಯದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಫೆ.27ರಂದು ಬುಧವಾರ ನಡೆಯಲಿದೆ. ಮಹೋತ್ಸವದ ಅಂಗವಾಗಿ ಬೆಳಗ್ಗಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರಾಟೆ ಬೆಲ್ಟ್ ಬೆಸ್ಟ್ ಪ್ರಶಸ್ತಿ ಸಮಾರಂಭ
ಶೃಂಗೇರಿ: ಪಟ್ಟಣದ ಜೆಸಿಬಿಎಂ ಕಾಲೇಜಿನ ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ಟೇಕ್ವಾಂಡೋ ಮಾರ್ಷಲ್ ಅಸೋಶಿಯೇಶನ್ ಆಶ್ರಯದಲ್ಲಿ ಟೇಕ್ವಾಂಡೋ ಬೆಲ್ಟ್ ಅವಾರ್ಡ್ ಸಮಾರಂಭ ನಡೆಯಿತು. ತಾಪಂ ಮಾಜಿ ಅಧ್ಯಕ್ಷ ನಯನ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿ, ಕರಾಟೆ ಒಂದು ಆತ್ಮರಕ್ಷಣೆ ಕಲೆಯಾಗಿದ್ದು, ಇದು ದಕ್ಷಿಣ ಕೊರಿಯಾದಲ್ಲಿ ಪ್ರಾರಂಭವಾಯಿತು. ನಂತರ ಒಲಂಪಿಕ್ಸ್‌ಗೆ ಸೇರ್ಪಡೆಗೊಂಡಿತು. ಯುವಜನಾಂಗ ಕರಾಟೆ ಕಲೆಯತ್ತ ಆಕರ್ಷಿತರಾಗಬೇಕು ಎಂದರು. ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಕೆ. ಪರಾಶರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗಿರೀಶ್, ರಾಜಶೇಖರ್, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುವೆಂಪು ವಿಶ್ವವಿದ್ಯಾನಿಲಯ ಸಂಯುಕ್ತ ಆಶ್ರಯದಲ್ಲಿ ನಗರದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ಮಾ.2 ಮತ್ತು 3ರಂದು ಅಂತರ ಕಾಲೇಜು ವಿದ್ಯಾರ್ಥಿಗಳ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಏರ್ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಕವಿ ಕಾವ್ಯ ಸಂಭ್ರಮ, ವಿಚಾರ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ. ಎರಡು ಸಮಾನಾಂತರ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

