ಉಸಿರುಗಟ್ಟಿಸಿ ಪತ್ನಿಯ ಕೊಲೆ ನಡೆಸಲು ಯತ್ನ: ಪತಿ ಬಂಧನ
ಮೂಡಿಗೆರೆ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ನಡೆಸಲು ಪ್ರಯತ್ನಿಸಿರುವ ಘಟನೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದ್ದು ಈ ಕುರಿತು ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಂತಿನಗರ ನಿವಾಸಿಗಳಾದ ರಫೀಕ್, ಆತನ ತಂದೆ ಹಮೀದ್, ತಾಯಿ ಖತೀಜಾಬಿ, ಸಹೋದರ ರಜಾಕ್ ಹಾಗೂ ಪಕ್ಕದ ಮನೆಯವರಾದ ಆದಂ ಮತ್ತು ಇಬ್ರಾಹೀಂ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಕಳೆದ ಐದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಉಸ್ಮಾನ್ ಎಂಬವರ ಪುತ್ರಿ ಜೋಹರಳನ್ನು ಹಮೀದ್ ಎಂಬವರ ಪುತ್ರ ರಫೀಕ್ 1 ಲಕ್ಷ ನಗದು ಸಹಿತ 25 ಪವನ್ ಚಿನ್ನಾಭರಣ ನೀಡಿ ವಿವಾಹ ಮಾಡಿಕೊಡಲಾಗಿತ್ತು. ಆದರೆ ರಫೀಕ್ ಮತ್ತಷ್ಟು ವರದಕ್ಷಿಣೆ ಹಣ ತರುವಂತೆ ಪೀಡಿಸತೊಡಗಿದನಲ್ಲದೇ ದೈಹಿಕ ಮತ್ತು ಮಾನಸಿಕ ಕಿರುಕುಳ ನೀತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎಷ್ಟೇ ಹಣ ನೀಡಿದ್ದರೂ ರಫೀಕ್, ಇತರೆ ಆರೋಪಿಗಳೊಂದಿಗೆ ಸೇರಿ ಆಕೆಯ ಕುತ್ತಿಗೆಯಲ್ಲಿದ್ದ ಶಾಲು ಬಿಗಿದು ಕೊಲೆಗೆ ಪ್ರಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ರಫೀಕ್ ಪತ್ನಿ ಜೋಹರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವ ಬಣಕಲ್ ಠಾಣಾಧಿಕಾರಿ ಹೊಸ್ಕೇರಪ್ಪ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

