ಚಿಕ್ಕಮಗಳೂರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರ ಆಯ್ಕೆ

Published On :

ಮೂಡಿಗೆರೆ: ತಾಲೂಕು ಬಿಜೆಪಿ ಘಟಕದ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಐವಿನ್ ಪಿಂಟೋ ಆಯ್ಕೆಯಾಗಿದ್ದಾರೆ ಎಂದು ತಾಲೂಕ್ ಅಧ್ಯಕ್ಷ ಡಿ.ಎಸ್. ಸುರೇಂದ್ರ ತಿಳಿಸಿದ್ದಾರೆ.
 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಪಂ ಚುನಾವಣೆಗೆ ಪಟ್ಟಣದ 11 ವಾರ್ಡ್‌ಗಳಿಗೆ ಸ್ಪರ್ಧಿಸಲು 11 ಅಭ್ಯರ್ಥಿಗಳಿಗೆ ಬಿ.ಫಾರಂ ನೀಡಲಾಗಿದ್ದು. ನಾಮ ಪತ್ರ ಸಲ್ಲಿಸಲಾಗಿದೆ ಪಪಂ ಬಿಜೆಪಿ ತಕ್ಕೆಗೆ ಬೀಳಲಿದೆ ಎಂದು ಭವಿಷ್ಯ ನುಡಿದರು.
ಅರಣ್ಯ ವಸತಿ ಮತ್ತು ವಿಹಾರ ಧಾಮದ ಅಧ್ಯಕ್ಷ ಎಂ.ಕೆ. ಪ್ರಾಣೇಶ್ ಮಾತನಾಡಿ, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಉತ್ತಮ ಕಾರ್ಯಗಳು ಹಮ್ಮಿಕೊಳ್ಳುವುದರೊಂದಿಗೆ. ಪಟ್ಟಣದ ಸೌಂದರ್ಯಕ್ಕೆ ಮೊದಲ ಆಧ್ಯತೆ ನೀಡಲಾಗಿದೆ ಎಂದರು. ಪಕ್ಷದ ಎಂ.ಆರ್. ಜಗದೀಶ್, ಎಂ.ಎಲ್. ಕಲ್ಲೇಶ್, ಬಿ.ಎನ್. ಜಯಂತ್, ಚಂದ್ರಶೇಖರ್, ಜಿಪಂ ಸದಸ್ಯ ಅರೇಕುಡಿಗೆ ಶಿವಣ್ಣ, ಜೆ.ಎಸ್. ರಘು, ಟಿ. ಹರೀಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.