ಜೆಡಿಎಸ್‌ಗೆ ಗೆಲವು ಖಚಿತ: ರಾಜೇಂದ್ರ
ಕೊಪ್ಪ: ಈ ಹಿಂದೆ ಪಪಂನ ಅಧಿಕಾರಾರೂಢ ಬಿಜೆಪಿ ಸದಸ್ಯರು ನಡೆಸುತ್ತಿದ್ದ ಸ್ವಜನ ಪಕ್ಷಪಾತ ಮತ್ತು ಭ್ರಷ್ಟಾಚಾರ ವಿರುದ್ಧ ಜೆಡಿಎಸ್ ಸದಸ್ಯರು ಪ್ರಬಲ ವಿರೋಧ ವ್ಯಕ್ತಪಡಿಸಿ, ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿರುವಹಿಸಿರುವುದೇ ಈ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ತಿಳಿಸಿದ್ದಾರೆ.
ಮಂಗಳವಾರ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಪಂ ಆಡಳಿತದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರು ನೇರವಾಗಿ ಹಸ್ತಕ್ಷೇಪ ಮಾಡಿ ಏಕಮುಖ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜನರಿಗೆ ನಷ್ಟ- ಕಷ್ಟಗಳನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಸೋಮವಾರ 4ನೇ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರುಗಳು ಇದೇ ವಾರ್ಡ್ ನ ಜೆಡಿಎಸ್ ಅಭ್ಯರ್ಥಿ ಮಾನಸ ತಿಮ್ಮಪ್ಪ ರವರಿಗೆ ಹಣ ಮತ್ತು ನಿವೇಶನದ ಅಮಿಷ ಒಡ್ಡಿ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸುತ್ತಿರುವುದು ಬಿಜೆಪಿಯವರು ಭ್ರಮನಿರಸನ ಹೊಂದಿರುವುದ ತೋರುತ್ತದೆ ಎಂದರು.
ಜೆಡಿಎಸ್ ಮುಖಂಡ ಹೂವಪ್ಪ ಗೌಡ, ವಿನಯ್ ಕಣಿವೆ, ಸುಧಾಕರ್, ಲಕ್ಷ್ಮೀಕಾಂತ್, ಕಾಡಪ್ಪ ಗೌಡ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

