ಚಿಕ್ಕಮಗಳೂರು

ಕಾರ್ಯಕರ್ತರು ಸಂಘಟಿತರಾಗಿ

Published On :

ಕಡೂರು: ಚುನಾಣೆಗಳನ್ನು ಸಮರ್ಥವಾಗಿ ಎದುರಿಸಲು ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್ ಹೇಳಿದರು.
ಪಟ್ಟಣದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಫಿಕಾರ್ಡ್ ಬ್ಯಾಂಕ್ ನಿರ್ದೇಶಕ ಕೆ.ಎಚ್. ರಂಗನಾಥ್, ಕೆ.ಎಚ್. ಉಮೇಶ್, ಮಾಜಿ ಪುರಸಭಾ ಅಧ್ಯಕ್ಷ ಕೆ.ಎಚ್. ಗೋಪಿ, ಮಾಜಿ ತಾಪ ಅಧ್ಯಕ್ಷೆ ವನಮಾಲ ದೇವರಾಜ್ ಮತ್ತಿತರರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆ ನಿಟ್ಟಿನಲ್ಲಿ ಪಕ್ಷ ಎಲ್ಲ ರೀತಿಯಲ್ಲಿ ಚುನಾವಣೆಗಳನ್ನು ಎದುರಿಸಲು ಸನ್ನದ್ದವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪಕ್ಷ ಸಮರ್ಥವಾಗಿ ಎದುರಿಸುತ್ತಿದ್ದು, ಕಡೂರು ಹಾಗೂ ಬೀರೂರು ಪಟ್ಟಣಗಳ 23 ವಾರ್ಡುಗಳಲ್ಲಿಯೂ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಈ ಎರಡೂ ಪುರಸಭೆಗಳ ಎಲ್ಲ ವಾರ್ಡುಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಲಿದೆ ಎಂದರು.
ಕೆ.ಎಚ್. ಉಮೇಶ್ ಮಾತನಾಡಿ, ಜೆಡಿಎಸ್ ಮುಖಂಡರ ವರ್ತನೆಯಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಡೂರು ಪುರಸಭೆಯಲ್ಲಿ 15 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಆಟೋ ಆನಂದ್, ಕೋಳಿ ಮುದಿಯಪ್ಪ, ಸುರತಾಳ್ ರಂಗನಾಥ್ ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಯಾದರು. ಕೆ.ಎಸ್. ಆನಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹೇಶ್ ಒಡೆಯರ್, ನಂಜಪ್ಪ, ಚಂದ್ರಪ್ಪ, ವಿನಾಯಕ, ಸಾವಿತ್ರಿ ಗಂಗಪ್ಪ, ಡಿ. ಲಕ್ಷ್ಮಣ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.