ಅರ್ಜಿ ಆಹ್ವಾನ
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಸ್ತುತ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ಮೂರು ಶೈಕ್ಷಣಿಕ ವರ್ಷಗಳಲ್ಲಿ ಮಕ್ಕಳ ವಿಜ್ಞಾನಗೋಷ್ಠಿ, ಪ್ರತಿಭಾ ಕಾರಂಜಿ, ವಿಜ್ಞಾನ ನಾಟಕ ಸ್ಪರ್ಧೆ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ, ವಿಜ್ಞಾನ ಮತ್ತು ಪ್ರದರ್ಶನ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಇತ್ಯಾದಿಗಳಲ್ಲಿ ಬಹುಮಾನ, ಪ್ರಶಸ್ತಿ, ಗುಣಾಂಕಗಳ ಮತ್ತು ಎನ್.ಟಿ.ಎಸ್.ಸಿ. ಪರೀಕ್ಷಾ ಫಲಿತಾಂಶಗಳ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ನಡೆಯಲಿದೆ.
18 ವರ್ಷ ವಯಸ್ಸಿನ್ನೊಳಗಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಶಾಲಾ ಮುಖ್ಯಸ್ಥರ ಮೂಲಕ ಮಾ.10ರೊಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ. 24/2, 20ನೇ ಮುಖ್ಯ ರಸ್ತೆ ಬನಶಂಕರಿ, 2ನೇ ಹಂತ ಬೆಂಗಳೂರು- 70 ಇವರನ್ನು ಸಂಪರ್ಕಿಸಬಹುದು.
ಸೇನಾ ಭರ್ತಿ ರ್ಯಾಲಿ
ಭಾರತೀಯ ನೌಕಸೇನಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ರ್ಯಾಲಿಯು ಮಾ.15ರಂದು ಬೆಳಗ್ಗೆ 5 ಗಂಟೆಗೆ ಕಾರವಾರದ ಅರಗದ ಮುಖ್ಯ ಗೇಟಿನ, ಐಎನ್‌ಎಸ್ ಕದಂಬದಲ್ಲಿ ಆಯೋಜಿಸಲಾಗಿದೆ.
1992 ಆಗಸ್ಟ್ 1ರಿಂದ 1996 ಜುಲೈ 30 ರೊಳಗೆ ಜನಿಸಿದ, ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾದ ಆಸಕ್ತ ಅವಿವಾಹಿತ ಯುವಕರು ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

