ಕಮಾಲಾಪುರ ಶಾಲೆಯಲ್ಲಿ ಎನ್ಎಸ್ಎಸ್ ಶಿಬಿರ
ನರಸಿಂಹರಾಜಪುರ: ಭಾರತವನ್ನು ಆಳುತ್ತಿದ್ದ ಬ್ರಿಟಿಷರು 1860ರಲ್ಲಿ ಇಂಡಿಯನ್ ಪಿನಲ್ಲ್ಕೋಡ್ನಲ್ಲಿ ಕೆಲವು ಕಾನೂನು ಜಾರಿಗೆ ತಂದಿದ್ದರೂ ಸಹ ಈಗಲೂ ಅದೇ ಕಾನೂನು ಭಾರತದಲ್ಲಿ ಮುಂದುವರಿಯುತ್ತಿದೆ ಎಂದು ಆರಕ್ಷಕ ವೃತ್ತ ನಿರೀಕ್ಷಕ ಕೃಷ್ಣಮೂರ್ತಿ ತಿಳಿಸಿದರು.
ತಾಲೂಕಿನ ಕಮಾಲಾಪುರ ಶಾಲೆಯ ಆವರಣದಲ್ಲಿ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಬೇರೆ ಇಲಾಖೆಗಳ ಸಿಬ್ಬಂದಿಗಳು ನಿಗದಿತ ಸಮಯದಲ್ಲಿ ಮಾತ್ರ ಕೆಲಸ ಮಾಡಿದರೆ ಸಾಕು. ಆದರೆ, ಪೊಲೀಸ್ ಇಲಾಖೆಯು ದಿನದ 24 ಗಂಟೆಗಳ ಕಾಲವೂ ಕೆಲಸ ಮಾಡಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದಾಗ ಒತ್ತಡ ಎದುರಿಸಬೇಕಾಗುತ್ತದೆ. ಆದರೂ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತೇವೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದರು.
ಪ್ರೋತ್ಸಾಹ ಕಡಿಮೆ: ಠಾಣಾಧಿಕಾರಿ ತಿಮ್ಮರಾಜು ಅರಸ್ ಮಾತನಾಡಿ, ಪೊಲೀಸ್ ಇಲಾಖೆಯ ಬಗ್ಗೆ ಮಾಹಿತಿ ನೀಡಿ, ಪೊಲೀಸರು ಉತ್ತಮ ಕೆಲಸ ಮಾಡಿದಾಗ ಯಾರೂ ಪ್ರೋತ್ಸಾಹದ ಮಾತನಾಡುವುದಿಲ್ಲ ಎಂದರು.
ಕಮಾಲಾಪುರ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವೈ.ಕೆ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಪ್ಪ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಪಿ.ದೇವರಾಜ್, ಕಾಲೇಜು ಅ.ಸ. ಸದಸ್ಯರಾದ ಅನಿತಾ ಚಂದ್ರಶೇಖರ್, ಇತಿಹಾಸ ಸಹ ಪ್ರಾಧ್ಯಾಪಕ ನಾಗೇಶಗೌಡ, ವಾಣಿಜ್ಯ ಸಹಾಯಕ ಪ್ರಾಧ್ಯಾಪಕ ಉದಯಕುಮಾರ್, ಪ್ರಾಧ್ಯಾಪಕ ವಿಜೇಂದ್ರ, ಸೀತೂರು ವಿಜೇಂದ್ರ, ಕೃಷಿಕರಾದ ರಾಘವೇಂದ್ರ, ಶ್ಯಾಮರಾವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

