ಗೋರಕ್ ಸಿಂಗ್ ವರದಿ ಅನುಷ್ಠಾನಕ್ಕೆ ಆಗ್ರಹ
ಶೃಂಗೇರಿ: ಅಡಕೆ ಹಳದಿ ಎಲೆ ರೋಗ, ಸತತ ಬೆಲೆ ಏರಿಕೆ, ಮಾರುಕಟ್ಟೆ ಬೆಲೆ ಕುಸಿತ, ವಿಪರೀತ ಸಾಲದಿಂದಾಗಿ ರೈತರ ಬದುಕು ಶೋಚನೀಯವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇವರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ತಾಲೂಕು ಕಚೇರಿ ಎದುರು ತಾಲೂಕು ಬಿಜೆಪಿ ಘಟಕ ಅಡಕೆ ಹಳದಿ ಎಲೆ ರೋಗ ಪೀಡಿತ ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಗೋರಕ್ ಸಿಂಗ್ ವರದಿಯ ಯಥಾವತ್ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಎರಡು ದಿನಗಳ ಬೃಹತ್ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು.
ಕೇಂದ್ರ ಸಚಿವರು ಗೋರಕ್ ಸಿಂಗ್ ವರದಿ ಅನುಷ್ಠಾನಗೊಳಿಸುವುದಾಗಿ, ರೈತರ ಸಂಪೂರ್ಣ ಸಾಲ ಮನ್ನಾ, ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸುವ ಭರವಸೆ ನೀಡಿ, ಕಳೆದ ಉಡುಪಿ ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯ ಲಾಭ ಪಡೆದುಕೊಂಡು ರೈತರನ್ನು ದಿಕ್ಕು ತಪ್ಪಿಸಿ ವಂಚಿಸಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಅಧ್ಯಕ್ಷ ನಯನ ಮಾತನಾಡಿ, ಕೇಂದ್ರ ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಗೋರಕ್ ಸಿಂಗ್ ವರದಿ ಅನುಷ್ಠಾನಗೊಳಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಪರಿಹಾರ ಪ್ಯಾಕೇಜ್ ಬಿಡುಗಡೆಗೊಳಿಸಬೇಕು ಎಂದರು.
ತಾಪಂ ಮಾಜಿ ಅಧ್ಯಕ್ಷ ಅರುಣ್‌ಕುಮಾರ್, ಸುರೇಶ್ ಜಟಿಗೇಶ್ವರ್, ರಮೇಶ್, ಬಿ. ಶಿವಶಂಕರ್, ಕೆ.ಎಂ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

