ಕಾಂಗ್ರೆಸ್ ಪರ ಒಲವು
ಮೂಡಿಗೆರೆ: ಬಿಜೆಪಿ ದುರಾಡಳಿತದ ವಿರುದ್ಧ ಮತದಾರರಿಗೆ ತಿಳಿಹೇಳುವುದರ ಮೂಲಕ ಕಾಂಗ್ರೆಸ್ಗೆ ಮತದಾರರು ಒಲವು ತೋರಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ಎನ್. ಚಂದ್ರಪ್ಪ ಅಭಿಪ್ರಾಯ ಪಟ್ಟರು. ಪಟ್ಟಣದ ಹನ್ನೊಂದನೇ ವಾರ್ಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿ, ಪಪಂ 11 ವಾರ್ಡ್ಗಳಿಂದಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದು. ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ಗೆ ಆಗಮಿಸಿದ್ದು, ಪಪಂನ ಬಹುತೇಕ ವಾರ್ಡ್ಗಳು ಕಾಂಗ್ರೆಸ್ ಮಡಲಿಗೆ ಬರುವುದರಲ್ಲಿ ಸಂದೇಹವಿಲ್ಲ ಎಂದರು. ಪಪಂ ಮಾಜಿ ಅಧ್ಯಕ್ಷ ಜಿ.ಎಚ್. ಹಾಲಪ್ಪಗೌಡ ಮಾತನಾಡಿದರು. 11 ನೇ ವಾರ್ಡ್ ಅಭ್ಯರ್ಥಿ ಟಿ.ಎ. ಮದೀಶ್, ಸಿ.ಎಂ. ಗೋಪಾಲಗೌಡ, ವಿಮಲಾ ಹಾಲಪ್ಪಗೌಡ, ನಿವೇದಿತಾ ಮದೀಶ್ ಮೊಹಿದ್ದಿನ್ ಮತಯಾಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

