ಕೆಜೆಪಿ ಅಭ್ಯರ್ಥಿಗಳ ಜಯ ನಿಶ್ಚಿತ: ಮಂಜಯ್ಯ ವಿಶ್ವಾಸ
ಮೂಡಿಗೆರೆ: ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಗೆ ಆಡಳಿತದ ಚುಕ್ಕಾಣಿ ನೀಡಿರುವ ಜನರು ಅವರಿಂದ ನಿರೀಕ್ಷಿತ ಅಭಿವೃದ್ಧಿ ನಡೆಯದಿರುವುದರಿಂದ ಈ ಬಾರಿ ಕೆಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಕೆಜೆಪಿ ಎಸ್ಸಿ, ಎಸ್ಟಿ ವಿಭಾಗದ ಅಧ್ಯಕ್ಷ ಮಂಜಯ್ಯ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿ, ಪಕ್ಷ ಮೂಡಿಗೆರೆ ಪಪಂನ 9 ವಾರ್ಡ್ಗಳಲ್ಲಿ ಪ್ರಾಮಾಣಿಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎಲ್ಲಾ ವರ್ಗಗಳ ಮತದಾರರ ಆಶಿರ್ವಾದ ಪಕ್ಷದ ಮೇಲಿದೆ. ಈ ನಿಟ್ಟಿನಲ್ಲಿ ಕೆಜೆಪಿ ಅಭ್ಯರ್ಥಿಗಳು ಹೆಚ್ಚಿನ ಬಹುಮತದೊಂದಿಗೆ ಗೆಲುವು ಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯ ಹಾಗೂ ಸ್ಥಳೀಯ ಮಟ್ಟದ ಆಡಳಿತವನ್ನು ಹತ್ತಿರದಿಂದ ಗಮನಿಸಿರುವ ಮತದಾರರು ಯಡಿಯೂರಪ್ಪ ನೇತೃತ್ವದ ಕೆಜೆಪಿ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿದ್ದಾರೆ.
ಈ ಕಾರಣದಿಂದ ಮುಂಬರುವ ಅಸೆಂಬ್ಲಿ ಚುನಾವಣೆಗೆ ದಿಕ್ಸೂಚಿಯಾಗಬಲ್ಲ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಜೆಪಿ ಅತ್ಯಧಿಕ ಸ್ಥಾನ ಗಳಿಸುವಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

