ಚಿಕ್ಕಮಗಳೂರು

ಕ್ರಿಕೆಟ್: 3ರಂದು ಆಟಗಾರರ ಆಯ್ಕೆ ಪ್ರಕ್ರಿಯೆ

Published On :

ಚಿಕ್ಕಮಗಳೂರು:  ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ಬೇಸಿಗೆ ತರಬೇತಿ ಶಿಬಿರಕ್ಕಾಗಿ 16 ರಿಂದ 19 ವರ್ಷದೊಳಗಿನ ಬಾಲಕರ ಕ್ರಿಕೆಟ್ ಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಗರದಲ್ಲಿ ಮಾ. 3 ರಂದು ನಡೆಸಲಾಗುತ್ತಿದೆ ಎಂದು ವಲಯ ಸಂಚಾಲಕ ಕೆ.ಎನ್. ಪ್ರಭಾಕರ್ ತಿಳಿಸಿದ್ದಾರೆ.
ಶಿವಮೊಗ್ಗ ವಲಯ ವ್ಯಾಪ್ತಿಯಲ್ಲಿ ಬರುವ ಚಿಕ್ಕಮಗಳೂರು ನಗರದಲ್ಲಿ ಆಯ್ಕೆ ಪ್ರಕ್ರಿಯೆ ಬಯಸುವಂತ ಬಾಲಕರು ಜನ್ಮ ದೃಢೀಕರಣ ಪತ್ರ ಸೇರಿದಂತೆ ವಿವಿಧ ದಾಖಲೆಗಳೊಂದಿಗೆ ಮಾ. 3 ರಂದು  ಬೆಳಿಗ್ಗೆ 8.30ಕ್ಕೆ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 12.30 ಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಕಾಡೆಮಿ ವತಿಯಿಂದ 2 ತಿಂಗಳ ಕಾಲ ಉಚಿತ ತರಬೇತಿ ನೀಡಲಾಗುವುದು. ರಾಜ್ಯದ 29 ಜಿಲ್ಲೆಗಳಲ್ಲಿ ಈ ಶಿಬಿರವನ್ನು ಏಕ ಕಾಲಕ್ಕೆ ಹಮ್ಮಿಕೊಳ್ಳುವ ಮೂಲಕ ಕ್ರೀಡಾಪಟುಗಳ ಪ್ರತಿಭೆಗೆ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಆಸಕ್ತರು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9900144223 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದ್ದು, ವಿವಿಧ ವಯೋವುತಿ ಬಾಲಕರ ಕ್ರಿಕೆಟ್ ಪಟುಗಳ ಆಯ್ಕೆ ಪ್ರಕ್ರಿಯೆ ಇದಾಗಿದೆ.
ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.