ದಲಿತ ಮುಖಂಡ ರಾಜಣ್ಣಗೆ ಶ್ರದ್ಧಾಂಜಲಿ
ಚಿಕ್ಕಮಗಳೂರು: ಇತ್ತೀಚೆಗೆ ನಿಧನರಾದ ದಲಿತ ಮುಖಂಡ ರಾಜಣ್ಣ ಅವರಿಗೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಿಎಸ್ಪಿ, ಬಿಜೆಪಿ, ಕಾಂಗ್ರೆಸ್, ರೈತ ಸಂಘ, ಜೆಡಿಎಸ್, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಮೌನಾಚರಣೆ ಮೂಲಕ ಸಂತಾಪ ಸೂಚಿಸಿದರು.
ನೇರ ನುಡಿ ಸ್ವಭಾವದ ವ್ಯಕ್ತಿ: ಇದೇ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ, ನೇರ ನುಡಿ ಸ್ವಭಾವದ ವ್ಯಕ್ತಿ ರಾಜಣ್ಣ ಆಗಿದ್ದರು. ಹೋರಾಟಗಾರರಿಗೆ ಇರುವ ಗಟ್ಟಿ ಧ್ವನಿ ರಾಜಕಾರಣಿಗಳಿಗೆ ಬರಲು ಸಾಧ್ಯವಿಲ್ಲ. ಕಾಲಕ್ಕೆ ತಕ್ಕಂತೆ ವೇಷ ಹಾಕಿ ಬಣ್ಣ ಬದಲಿಸುವ ಹೋರಾಟಗಾರರಿಗೆ ಅವಕಾಶ ಸಿಗುತ್ತದೆ. ಆದರೆ, ನಿಸ್ವಾರ್ಥದಿಂದ ಹೋರಾಟ ನಡೆಸುವವರಿಗೆ ಅವಕಾಶಗಳು ಕಡಿಮೆ ಎಂದರು.
ಜೆಡಿಎಸ್ ಮುಖಂಡ ಎಸ್.ಎಲ್. ಭೋಜೇಗೌಡ ಮಾತನಾಡಿ, ನಮ್ಮ ಜತೆ ಬದುಕಿರುವಾಗ ಅವರ, ವಸ್ತುಗಳ ಮೌಲ್ಯ ಅರ್ಥವಾಗುವುದಿಲ್ಲ. ಆದರೆ, ಅವರು ನಮ್ಮಿಂದ ದೂರವಾದ ನಂತರ ಅವರ ಮಹತ್ವ ಅರಿವಿಗೆ ಬರುತ್ತದೆ. ನಿಷ್ಠುರವಾದಿಯಾಗಿ ಹೋರಾಟದ ಮನೋಭಾವದಿಂದ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ರಾಜಣ್ಣ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.
ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಕೆ.ಟಿ. ರಾಧಾಕೃಷ್ಣ ಮಾತನಾಡಿ, ಶೋಷಿತರ ವಲಯದಲ್ಲಿ ಸಂಚಲನ ಮೂಡಿಸಿದ್ದವರು ರಾಜಣ್ಣ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿದರು.
ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಚಲವಾದಿ ಮಹಾಸಭಾದ ಚಿಕ್ಕಯ್ಯ, ಹಿರೇಮಗಳೂರು ರಾಮಚಂದ್ರ, ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಶಾಂತಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎನ್. ಮಹೇಶ್, ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಜಿ.ಕೆ. ಬಸವರಾಜು, ಈಶ್ವರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಪಿ. ರಾಜರತ್ನಂ, ಜೆಡಿಎಸ್ ಮುಖಂಡ ಹಂಪಯ್ಯ, ನಿವೃತ್ತ ಶಿಕ್ಷಕ ಹರಿಯಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಓಂಪ್ರಕಾಶ್, ಜವರಯ್ಯ, ದುರ್ಗೇಶ್, ನಿವೃತ್ತ ಡಿವೈಎಸ್ಪಿ ಜವರಯ್ಯ, ಮುಖಂಡರಾದ ದಯಾನಂದ್, ಪುಟ್ಟಸ್ವಾಮಿ ಸೇರಿದಂತೆ ಹಲವರು ನುಡಿನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

