ಚಿಕ್ಕಮಗಳೂರು

ದೇಶ ನಿರ್ಮಾಣಕ್ಕೆ ಯುವಕರು ಮುಂದಾಗಲಿ

Published On :

ನರಸಿಂಹರಾಜಪುರ: ಭಾರತದ ಸಂವಿದಾನ ಬಲಿಷ್ಠವಾಗಿದ್ದು ಇದನ್ನು ಉಳಿಸಿಕೊಂಡು ಹೋಗುವ ಜವಬ್ದಾರಿ ಯುವಜನರ ಮೇಲಿದೆ ಎಂದು ಶಿಕ್ಷಣ ತಜ್ಞ ಕೆ.ಜಿ.ಎನ್. ಶಾಸ್ತ್ರಿ ತಿಳಿಸಿದರು.
ಕಮಲಾಪುರ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಸ್ವಾತಂತ್ರ್ಯ ಮತ್ತು ಯುವ ಜನತೆಯ ಜವಬ್ದಾರಿ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಕೊಪ್ಪ ಎಸ್ಬಿಎಂ ವ್ಯವಸ್ಥಾಪಕ ಕೆ. ರಂಗಸ್ವಾಮಿ ಗ್ರಾಮೀಣ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳ ಪಾತ್ರ ವಿಷಯದ ಬಗ್ಗೆ ಉಪನ್ಯಾಸ ನೀಡಿ, ಪ್ರಥಮ ಬಾರಿಗೆ ಇಂಗ್ಲೆಂಡ್ನಲ್ಲಿ 1666 ರಲ್ಲಿ ಬ್ಯಾಂಕ್ ಆಫ್ ಇಂಗ್ಲೆಂಡ್ ಪ್ರಾರಂಭವಾಗುವುದರೊಂದಿಗೆ ಜಗತ್ತಿನಲ್ಲಿ ಮೊದಲ ಬಾರಿಗೆ ಬ್ಯಾಂಕಿನ ವ್ಯವಸ್ಥೆ ಪ್ರಾರಂಭವಾಯಿತು. ಭಾರತದಲ್ಲಿ 1935 ರಲ್ಲಿ ಆರ್ಬಿಐ ಪ್ರಾರಂಭವಾಯಿತು. ದೇಶದ  ಎಲ್ಲಾ ಆರ್ಥಿಕ ವ್ಯವಸ್ಥೆಯನ್ನು ಬ್ಯಾಂಕ್ ನಿರ್ವಹಿಸುತ್ತಿದೆ. ಗ್ರಾಹಕರು ಬ್ಯಾಂಕ್ ಖಾತೆ ತೆಗೆಯುವರೊಂದಿಗೆ ಬ್ಯಾಂಕಿನೊಂದಿಗೆ ವ್ಯವಹಾರ ಪ್ರಾರಂಭವಾಗುತ್ತದೆ. ಪ್ರತಿಯೊಬ್ಬರು ಬ್ಯಾಂಕಿನಲ್ಲಿ ಖಾತೆ ತೆರೆಯಬೇಕು ಎಂದು ಅವರು ಮನವಿ ಮಾಡಿದರು.
ಕೊಪ್ಪ ಎಪಿಎಂಸಿ ಅಧ್ಯಕ್ಷ ಅದ್ದಡ ಸತೀಶ್ ಮಾತನಾಡಿ, ರಾಜಕಾರಣಿಗಳು ಎಲ್ಲರೂ ಕೆಟ್ಟವರಲ್ಲ. ಸಮಾಜ ಮುಖಿಯಾಗಿ ಚಿಂತನೆ ಮಾಡುವ ರಾಜಕಾರಣಿಗಳು ಇದ್ದಾರೆ. ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರವನ್ನು ತೊಡೆದು ಹಾಕುವ ಪ್ರತಿಜ್ಞೆ ಮಾಡೋಣ ಎಂದು ಕರೆ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಸೀತೂರು ಗ್ರಾಪಂ ಸದಸ್ಯೆ ವೀಣಾ ಶ್ರೀಧರ್ ವಹಿಸಿದ್ದರು. ಕೊಪ್ಪ ತಾಪಂ ಸದಸ್ಯ ಪೂರ್ಣಚಂದ್ರ, ಸೀತೂರು ಶ್ರೀನಿವಾಸ್, ಮಹೇಶ್, ಪ್ರಾಧ್ಯಾಪಕ ಡಾ.ಶ್ರೀಪತಿ ಹಳಗುಂದ, ವಿ. ನವೀನ್, ಕಮಲಾಪುರ ಕೃಷಿಕ ಕೆ.ಆರ್. ಗಣೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.