ಚಿಕ್ಕಮಗಳೂರು

ಪಲ್ಸ್ ಪೋಲಿಯೋ ಅಭಿಯಾನ ಉದ್ಘಾಟನೆ

Published On :

ತರೀಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪಲ್ಸ್ ಪೋಲಿಯೋ ಹನಿ ಅಭಿಯಾನ ಉದ್ಘಾಟನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪುರಸಭೆ ಅಧ್ಯಕ್ಷ ಎಂ. ನರೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ರೋಟರಿ ಸಂಸ್ಥೆಯ ಕೊಡುಗೆಯೇ ಅಪಾರವಾಗಿದೆ. ಆರೋಗ್ಯ ಇಲಾಖೆ ಕಂಕಣಬದ್ಧವಾಗಿ  ಶ್ರಮಿಸುತ್ತಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಟಿ.ಜಿ. ಶಶಾಂಕ, ಐಎಂಎ ಅಧ್ಯಕ್ಷ ಡಾ. ಗಿರೀಶ್, ಇನ್ನರ್‌ವ್ಹೀಲ್ ಅಧ್ಯಕ್ಷೆ ನಿರ್ಮಲರಾಜ್, ಉಪ ವಿಭಾಗಾಧಿಕಾರಿ ಅನುರಾಧಾ, ತಹಸೀಲ್ದಾರ್ ರಂಜಿತಾ, ಸಿಡಿಪಿಒ ಜ್ಯೋತಿಲಕ್ಷ್ಮಿ, ತಾಪಂ ಇ.ಒ ದೇವರಾಜ್, ತಾಲೂಕು ವೈದ್ಯಾಧಿಕಾರಿ ಡಾ. ಗಣೇಶ್, ಡಾ.ಎಸ್.ಎಸ್. ಆಚಾರ್ಯ, ಡಿ.ಜಿ.ಸಿ. ಶರತ್, ಬಿ. ರಾಜಪ್ಪ, ಕಾಂತರಾಜ್, ಆಸ್ಪತ್ರೆ ಸಿಬ್ಬಂದಿ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.  
ತಾಲೂಕಿನಲ್ಲಿ 19543, ತರೀಕೆರೆ ಪಟ್ಟಣದಲ್ಲಿ 2435 ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. ಜ.21ರಿಂದ ಪ್ರತಿ ಮನೆಗೂ ತೆರಳಿ ಪೋಲಿಯೋ ಹನಿ ಹಾಕಲಾಗುವುದು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಗಣೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.