ನರಸಿಂಹರಾಜಪುರ: ಇತ್ತೀಚೆಗೆ ನಿಧನರಾದ ಬಿಲ್ಲವ ಮಹಾಮಂಡಳದ ಜಿಲ್ಲಾಧ್ಯಕ್ಷ ದೇವು ಸುವರ್ಣರಿಗೆ ಬಾಳೆಹೊನ್ನೂರಿನ ನಾರಾಯಣಗುರು ಸಮುದಾಯ ಭವನದಲ್ಲಿ ಭಾನುವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಪಂ ಮಾಜಿ ಅಧ್ಯಕ್ಷ ಎಚ್.ಎಂ. ಸತೀಶ್ ಮಾತನಾಡಿ, ಸ್ವಾರ್ಥವೇ ತುಂಬಿರುವ ಇಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಗೆ ಸೇವೆ ಸಲ್ಲಿಸುವುವರು ಕಡಿಮೆಯಾಗಿದ್ದಾರೆ. ಆದರೆ, ಇದಕ್ಕೆ ಅಪವಾದ ಎಂಬಂತೆ ದೇವು ಸುವರ್ಣ ಅವರು ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಸ್ಮರಿಸಿದರು. ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ, ಸ್ಥಳೀಯ ಬಿಲ್ಲವ ಸಮಾಜದ ಅಧ್ಯಕ್ಷ ವಿ.ಜಿ. ನಾರಾಯಣ, ಕೊಪ್ಪ ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷ ಶರತ್ ಕಲ್ಲೆ, ರಮೇಶ್, ಆರ್. ಸದಾಶಿವ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಪ್ಪ, ಪ್ರಭಾಕರ್, ಜಿಲ್ಲಾ ಸಂಘದ ಅಧ್ಯಕ್ಷ ಕೇಶವ್, ಸ್ಥಳೀಯ ಸಂಘದ ಅಧ್ಯಕ್ಷ ಅರಳಿಕೊಪ್ಪ ಸತೀಶ್, ಸುವರ್ಣ, ಪ್ರಭಾಕರ್ ಉಪಸ್ಥಿತರಿದ್ದರು.