ಚಿಕ್ಕಮಗಳೂರು

ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ನೆರವು

Published On :

ತರೀಕೆರೆ: ತಾಲೂಕಿನ ಗಾಣಗಿತ್ತಿ ಮತ್ತು ಭೀಮನಹಳ್ಳ ನೀರಾವರಿ ಯೋಜನೆಗೆ ಈ ಬಾರಿಯ ಆಯವ್ಯಯದಲ್ಲಿ ಅಗತ್ಯ ಅರ್ಥಿಕ ನೆರವನ್ನು ಮೀಸಲಿಡುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒಪ್ಪಿಗೆ ನೀಡಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತರೀಕೆರೆ ತಾಲೂಕು ಶಾಖೆ ಪ್ರಧಾನ ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.
 ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯ ರೈತ ಸಂಘದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ತರೀಕೆರೆ ತಾಲೂಕಿನ ಗಾಣಗಿತ್ತಿ ಮತ್ತು ಭೀಮನಹಳ್ಳ ನೀರಾವರಿ ಯೋಜನೆಗೆ ಅಗತ್ಯವಾದ ಆರ್ಥಿಕ ಅನುದಾನವನ್ನು ಮೀಸಲಿರಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಉಬ್ರಾಣಿ ಸಮೀಪದ ಗಾಣಗಿತ್ತಿ ಹಳ್ಳದಿಂದ  ಬುಕ್ಕಾಂಬುದಿ ಕೆರೆ ಮತ್ತು ಶಿವನಿ ಕೆರೆಗೆ ನೀರು ಹರಿಯುತ್ತದೆ ಹಾಗೂ ಲಿಂಗದಹಳ್ಳಿ ಹೋಬಳಿಯ ಬೀಮನಹಳ್ಳ ನೀರಾವರಿ ಯೋಜನೆ ಇದಾಗಿದ್ದು, ಈ ಎರಡು ಯೋಜನೆಗೆ ಅಯವ್ಯಯದಲ್ಲಿ ಆರ್ಥಿಕ ನೆರವನ್ನು ಮೀಸಲಿಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
 ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ರೈತರ ಬೇಡಿಕೆಗಳನ್ನು ಪರಿಶೀಲಿಸಬೇಕೆಂದು ನೀರಾವರಿ ಇಲಾಖೆ ಉನ್ನತ ಅಧಿಕಾರಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ಚೆಲುವರಾಜ್ ಮತ್ತು ಎಂ.ಡಿ. ರುದ್ರಯ್ಯ ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚಿಸಲು 28 ರಂದು ಬೆಂಗಳೂರಿನಲ್ಲಿ ರೈತರ ಜೊತೆ ಅಂತಿಮ ಸುತ್ತಿನ ಮಾತುಕತೆ ನೆಡೆಸಲು ಸಭೆ ಕರೆದಿದ್ದಾರೆ ಎಂದು ಸುರೇಶ್ ತಿಳಿಸಿದ್ದಾರೆ.
 ತಾಲೂಕು ಶಾಖೆ ಗೌರವಾಧ್ಯಕ್ಷ ಎ.ಎಸ್. ಈಶ್ವರಪ್ಪ, ಅಧ್ಯಕ್ಷ ಹಾಲೇಶಪ್ಪ, ಕಾರ್ಯಾಧ್ಯಕ್ಷ ಎಸ್.ಬಿ. ಪುಟ್ಟಮಲ್ಲಪ್ಪ, ಸೋಮಶೇಖರ್ ಹಳೆಯೂರ್, ರವಿ ಶ್ಯಾನುಭೋಗನಹಳ್ಳಿ, ಸೋಮ್ಲನಾಯಕ್, ರುದ್ರಪ್ಪ, ರಾಜಶೇಖರ್, ಕಾಂತರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.