ಜೆಡಿಯು ಜಿಲ್ಲಾಧ್ಯಕ್ಷ ರಾಜಿನಾಮೆ
ಚಿಕ್ಕಮಗಳೂರು: ಜೆಡಿಯು ಜಿಲ್ಲಾಧ್ಯಕ್ಷ ಕೆ. ಭರತ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಜಿಲ್ಲಾ ಘಟಕವನ್ನು ವಿಸರ್ಜಿಸಿ ತಮ್ಮ ಸ್ಥಾನಕ್ಕೆ ನೀಡಿರುವ ರಾಜಿನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಎಂ.ಪಿ. ನಾಡಗೌಡ ಅವರಿಗೆ ಸಲ್ಲಿಸಲಾಗಿದೆ ಎಂದು ಕೆ. ಭರತ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಎರಡು ವರ್ಷಗಳಿಂದ ಸಂಯುಕ್ತ ಜನತಾದಳ ಪಕ್ಷ ಕಟ್ಟಿ ಬೆಳೆಸಲಾಗಿದೆ. ಪಕ್ಷದ ಮುಖಂಡರು ತಮಗೂ ಸೇರಿದಂತೆ ಹಲವರಿಗೆ ಸಹಕಾರವನ್ನು ನೀಡಿದ್ದಾರೆ. ತಮ್ಮನ್ನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದ ಪಕ್ಷದ ಮುಖಂಡರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.
ಬಿಎಸ್‌ಆರ್ ಪಕ್ಷದಿಂದ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲಾಗುವುದು, ಮುಂದಿನ ವಾರ ನಗರದಲ್ಲಿ ಪಕ್ಷದ ಕಚೇರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಿ.ಎಸ್. ದ್ವಾರಕನಾಥ್ ನಗರಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಇನ್ನಿತರೆ ಕಾರ್ಯಗಳು ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ವಾಜಿದ್, ತಂಬಿಯನ್, ವಿಜಯ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

