ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ
ತರೀಕೆರೆ: ತಾಲೂಕು ವಿಶ್ವಕರ್ಮ ಸಮಾಜದಿಂದ ಬುಧವಾರ ಪಟ್ಟಣದ ಕಾಳಿಕಾಂಬ ದೇವಾಲಯದ ಆವರಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್. ಮಂಜುನಾಥ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಯಾರೂ ಸಾಧಿಸಲಾರದಂತಹ ಕಾರ್ಯವನ್ನು ನೀವು ಸಾಧಿಸಿದ್ದೀರಿ. ದೇವಾಲಯದ ಆವರಣದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದೀರಿ. ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು ಮತ್ತು ಶಾಸಕರ ಅನುದಾನ ಕೂಡ ದೊರೆತಿದೆ. ತಮ್ಮ ಕೈಲಾದಷ್ಟು ಸಹಕಾರವನ್ನು ಖಂಡಿತ ನಿರ್ವಹಿಸುತ್ತೇನೆ. ಸಮುದಾಯ ಭವನ ನಿರ್ಮಾಣ ಕಾರ್ಯ ಶೀಘ್ರ ನೆರವೇರಲಿ ಎಂದು ತಿಳಿಸಿದರು.
ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಎ.ಆರ್. ಈಶ್ವರಾಚಾರ್ ಮಾತನಾಡಿ, ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲರ ಸಹಕಾರ ಕೋರಿದರು.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಎಸ್.ಒ. ಅರುಣ್ಕುಮಾರ್, ಧರ್ಮದರ್ಶಿಗಳಾದ ಶೇಖರಾಚಾರ್, ಅನಂತಾಚಾರ್, ವಾಸುದೇವಾಚಾರ್, ಸ್ವಾಮಿ, ನವೀನ್, ವಿಶ್ವಕರ್ಮ ಸಮಾಜದ ಸದಸ್ಯರು, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ದುಗ್ಲಾಪುರ ಮಂಜುನಾಥ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

