ಕಮರಿಗೆ ಉರುಳಿದ ಲಾರಿ: ಮೂವರಿಗೆ ತೀವ್ರ ಗಾಯ
ಕೊಪ್ಪ: ತಾಲೂಕಿನ ಹರಿಹರಪುರದ ಸಮೀಪದ ಸೀಗದಾಳ್ ತಿರುವಿನಲ್ಲಿ ಟಾರ್ ಮಿಶ್ರಿತಾ ಚೆಲ್ಲಿಕಲ್ಲು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರಿಳಿದ ಪಾರಿಣಾಮ ಲಾರಿಯಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಖಾಸಗಿ ಸಂಸ್ಥೆಗೆ ಸೇರಿದ ಟಿಪ್ಪರ್ ಲಾರಿಯೊಂದರಲ್ಲಿ ತೀರ್ಥಹಳ್ಳಿಯಿಂದ ಟಾರ್ ಮಿಶ್ರಿತ ಚೆಲ್ಲಿಕಲ್ಲನ್ನು ತುಂಬಿಕೊಂಡು ಕೊಪ್ಪ ಮಾರ್ಗವಾಗಿ ಕಾಮಗಾರಿ ನಡೆಯುವ ಸ್ಥಳಕ್ಕೆ ತೆಗೆದು ಕೊಂಡು ಹೋಗುವ ಮಾರ್ಗದಲ್ಲಿ ಎದುರಿಗೆ ಬಂದ ಲಾರಿಗೆ ದಾರಿ ಬಿಡುವ ಸಂದರ್ಭದಲ್ಲಿ ಈ ಘಟನೆಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಹಾಲಪ್ಪ, ಪುನೀತ್, ಡಾಲ್ವಿನ್ ಪಿಂಟೋ ತೀವ್ರವಾಗಿ ಗಾಯ ಗೊಂಡಿದ್ದಾರೆ. ಇವರನ್ನು ತಿರ್ಥಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

