ಯುವಕರಿಂದ ದೇಶದ ಅಭಿವೃದ್ಧಿ

Updated on: 

ಚಿಕ್ಕಮಗಳೂರು: ಯುವಜನತೆಯಲ್ಲಿ ಹುದುಗಿರುವ ಅಸಾಮಾನ್ಯ ಶಕ್ತಿಯನ್ನು ಹೊರ ತೆಗೆದರೆ ದೇಶದ ಬೆಳವಣಿಗೆಗೆ ನಾಂದಿಯಾಗಬಲ್ಲದು ಎಂದು ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಹೇಳಿದ್ದಾರೆ.
ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಯುವ ರೆಡ್ ಕ್ರಾಸ್ ಘಟಕವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಯುವಕರನ್ನು ರೆಡ್ ಕ್ರಾಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.
ಸಮಾಜ ಸೇವೆ ಅಗತ್ಯ: ಮನುಷ್ಯರಿಗೆ ಸಮಾಜದ ಹಲವಾರು ಋಣಗಳಿವೆ. ಅವುಗಳನ್ನು ತೀರಿಸಲು ಸಮಾಜ ಸೇವೆ ಅಗತ್ಯ. ಸಮಾಜಮುಖಿ ಸಂಘಟನೆಯಾಗಿರುವ ರೆಡ್ ಕ್ರಾಸ್ ಚಟುವಟಿಕೆಗಳು ವಿದ್ಯಾ ಸಂಸ್ಥೆಗಳಿಗೆ ವಿಸ್ತರಿಸಿರುವುದು ಶ್ಲಾಘನೀಯ. ಸಮಾಜವನ್ನು ಎತ್ತರಕ್ಕೆ ಕೊಂಡೊಯ್ಯಲು ದೇಶಸೇವೆ ಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದು ಅವಶ್ಯಕ ಎಂದು ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚಿಕ್ಕಮಗಳೂರು ಶಾಖೆ ಸಭಾಪತಿ ಡಾ. ಕೆ. ಸುಂದರ್‌ಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ತ್ಯಾಗ, ಮನೋಭಾವನೆ, ಸಹಬಾಳ್ವೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಯುವ ಜನತೆಯನ್ನು ರೆಡ್ಸ್ ಕ್ರಾಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯುವ ರೆಡ್ಸ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
ಐಡಿಎಸ್‌ಜಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಹೆಚ್. ನರೇಂದ್ರ ಪೈ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಲವಾರು ಸಂಘಗಳಿವೆ. ಯುವ ರೆಡ್ಸ್ ಘಟಕ ಸ್ಥಾಪನೆಯಿಂದ ವಿದ್ಯಾರ್ಥಿಗಳಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೊಸ ಹುರುಪು ಬರಲಿದೆ ಎಂದರು.
ಐಡಿಎಸ್‌ಜಿ ಕಾಲೇಜು ಪ್ರಾಂಶುಪಾಲೆ ಡಾ. ಜರೀನಾ ಕೌಸರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಬಾಬುಶಂಕರ್, ಸಿಸ್ಟರ್ ಮೇರಿ, ಡಾ. ಕುಚೇಂದ್ರ ಉಪಸ್ಥಿತರಿದ್ದರು.
ಯುವ ರೆಡ್ಸ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಕೆ.ಸಿ. ಜಗದೀಶ್ ಸ್ವಾಗತಿಸಿ, ಕಾಂತರಾಜು ವಂದಿಸಿದರು. ಮಂಜಪ್ಪ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com