ಶಿಂಧೆ ಹೇಳಿಕೆ ಖಂಡಿಸಿ ಪ್ರತಿಭಟನೆ
ಹರಿಹರ: ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಹೇಳಿಕೆ ಖಂಡಿಸಿ ಗುರುವಾರ ಭಾರತೀಯ ಜನತಾ ಪಾರ್ಟಿ ಹರಿಹರ ತಾಲೂಕು ಘಟಕ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತರು ಶಿವಮೊಗ್ಗ ರಸ್ತೆ, ರಾಣಿ ಚೆನ್ನಮ್ಮ ವೃತ್ತ, ಮುಖ್ಯರಸ್ತೆ, ಮಹತ್ಮಾಗಾಂಧಿ ವೃತ್ತದ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಜಿ. ನಜ್ಮಾ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಶಿವಪ್ರಕಾಶ ಶಾಸ್ತ್ರಿ, ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಬಿಜೆಪಿ ಹಾಗೂ ಆರ್ಎಸ್ಎಸ್ ಹಿಂದೂ ಸಂಘಟನೆಗಳು ಉಗ್ರವಾದಿಗಳು ಎಂದು ಹೇಳುವ ಮೂಲಕ ಪಕ್ಷ, ಆರ್ಎಸ್ಎಸ್ ಸಂಘಟನೆ ಹಾಗೂ ದೇಶದ ಸಮಸ್ತ ಹಿಂದೂ ಸಂಘಟನೆಗಳು ಹಾಗೂ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿರುವ ಕೇಂದ್ರ ಕಾಂಗ್ರೆಸ್ ನಾಯಕರು ಇಂಥಹ ಹೇಳಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ. ಆರ್ಎಸ್ಎಸ್ ಹಾಗೂ ಬಿಜೆಪಿ ಇಡೀ ದೇಶದ ಸ್ವಾತಂತ್ರ್ಯಕ್ಕೆ, ಐಕ್ಯತೆಗೆ ಹಾಗೂ ಸಮಗ್ರತೆಗೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ. ಸಾವಿರಾರು ಹಿಂದೂಗಳು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ನೀಡಿದ್ದಾರೆ. ಆದರೆ ಅನಗತ್ಯವಾಗಿ ಇಂಥಹ ಬೇಜವ್ದಾರಿ ಹೇಳಿಕೆ ನೀಡುವ ಮೂಲಕ ಶಿಂಧೆ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಮೃತ್ಯುಂಜಯಪ್ಪ, ಪ್ರಧಾನ ಕಾರ್ಯದರ್ಶಿ ಪರಶುರಾಮ ಕಾಟ್ವೆ, ಸಹ ಕಾರ್ಯದರ್ಶಿ ರಾಜು ಖಿರೋಜಿ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಪಿ. ಶಾಮಣ್ಣ, ಕೆ.ಎಚ್. ನಾಗನಗೌಡ, ದೂಡಾ ಸದಸ್ಯ ನಾಗರಾಜ್ ಐರಣಿ, ಶಂಕರ್ ಲಾದ್ವಾ, ವೆಂಕಟೇಶ ಶ್ರೇಷ್ಟಿ, ಗೌಡರ ಚನ್ನಬಸಪ್ಪ, ಕೃಷ್ಣಾ ತಲ್ಲೂರು, ಆರ್. ಶ್ರೀನಿವಾಸ, ಸುರೇಶ್, ಚಿದಾನಂದ, ಗಣೇಶ ಕಾಟ್ವೆ, ಪ್ರಶಾಂತ್, ರಾಚಪ್ಪ, ಅನಿಲ್ ಸಾವಂತ್, ತಾಪಂ ಸದಸ್ಯೆ ಶಾಂತಾಬಾಯಿ, ವಿಜಯಲಕ್ಷಿ ತೇಲ್ಕರ್, ಜಮುನಾ ಹಾಗೂ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

