ಚಿಕ್ಕಮಗಳೂರು

ವಿವೇಕಾನಂದರ 150ನೇ ಜನ್ಮ ದಿನ

Published On :

ಮೂಡಿಗೆರೆ: ತಾಲೂಕಿನ ಕಳಸ ಸಮೀಪದ ಜಾವಳಿಯಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಜಾವಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮ ಹತ್ತು ಹಲವು  ವಿಶೇಷತೆಗಳಿಂದ ಗಮನ ಸೆಳೆಯಿತು. ಜಾವಳಿಯ ಮುಖ್ಯರಸ್ತೆಯಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು  ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಕುಳ್ಳಿರಿಸಿ ಮೆರವಣಿಗೆ ಮಾಡಲಾಯಿತು. ನಂತರದಲ್ಲಿ ಶಾಲಾ ಮಕ್ಕಳಿಗೆ ವಿವೇಕಾನಂದರ ವೇಷಭೂಷಣ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಂತರ ಕಳಸ ಪ್ರಭೋಧಿನಿ ವಿದ್ಯಾಕೇಂದ್ರದ ಮುಖ್ಯೋಪಾದ್ಯಾರಾದ ಆನಂದ್ ಗುರೂಜಿ ವಿವೇಕಾನಂದರು ಬೆಳೆದು ಬಂದ ರೀತಿ, ಅವರ ಆದರ್ಶಗಳ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಾವಳಿ ಗ್ರಾಪಂ ಅಧ್ಯಕ್ಷೆ ಕೆ.ಎಲ್. ರೇಣುಕಾ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆಶೋಕ್.ಆರ್, ಬಾಳೂರು ಕಸಪಾದ ಅಧ್ಯಕ್ಷರಾದ ಗಣಪತಿ ಆಚಾರ್, ಜಾವಳಿ  ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕರಾದ ಕೆ. ಮನೋಜ್ ಕಾಮತ್, ಶಾಲಾಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.