ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ಮೂಡಿಗೆರೆ: ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಎಐವೈಎಫ್ ಸಂಘಟನೆಯ ವತಿಯಿಂದ ಶನಿವಾರ ಪ್ರಾರಂಭವಾದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಅರ್ಜುನ ಪ್ರಶಸ್ತಿ ವಿಜೇತ ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಬಿ.ಸಿ. ಪರಮೇಶ್ ಉದ್ಘಾಟಿಸಿದರು.
ಪಟ್ಟಣದ ಪರಿಮಳಮ್ಮ ದೇವಾಲಯದಿಂದ ಪ್ರಾಂಭವಾದ ಕ್ರೀಡಾಜ್ಯೋತಿಯನ್ನು ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಡ್ಯಂತಾಯ ರಂಗ ಮಂದಿರದ ಆವರಣದಲ್ಲಿ ನಿರ್ಮಿಸಲಾದ ಕ್ರೀಡಾಂಗಣದೊಳಗೆ ಕರೆ ತರಲಾಯಿತು. ತಹಸೀಲ್ದಾರ್ ಮಂಜುನಾಥ್ ಕ್ರೀಡಾ ಅಂಕಣವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಸಿಪಿಐನ ಎಚ್.ಟಿ. ರವಿಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷ ಎಂ.ವಿ. ಶೇಷಗಿರಿ, ಪ.ಪಂ. ಅಧ್ಯಕ್ಷೆ ಲತಾಲಕ್ಷ್ಮಣ್, ಉಪಾಧ್ಯಕ್ಷೆ ಆರ್. ಪಾರ್ವತಮ್ಮ, ಜಿ.ಪಂ. ಸದಸ್ಯರಾದ ಅರೆಕುಡಿಗೆ ಶಿವಣ್ಣ, ತಾಪಂ ಸದಸ್ಯ ಎ.ಜಿ. ಸುಬ್ರಾಯ, ಎಪಿಎಂ ಸದಸ್ಯ ಲಕ್ಷ್ಮಣ್ , ಉಪಾಧ್ಯಕ್ಷೆ ಪಾರ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮೇಗೌಡ, ಜಿ.ಪಂ. ಸದಸ್ಯ ಅರೆಕುಡಿಗೆ ಶಿವಣ್ಣ, ಜ್ಯೋತಿ ಹೇಮಶೇಖರ್, ತಾ.ಪಂ. ಸದಸ್ಯ ಎ.ಜೆ. ಸುಬ್ರಾಯ, ಹೂವಮ್ಮ, ಸಿ.ಪಿ.ಐನ ಸಹಕಾರ್ಯದರ್ಶಿ ಸಾತಿ ಸುಂದರೇಶ್, ಬಾಳುರ್ ರಮೇಶ್, ಬಿ.ಕೆ. ಲಕ್ಷ್ಮಣ್ಕುಮಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

