ನೆಮ್ಮಾರು ಗ್ರಾಮಸಭೆ
ಶೃಂಗೇರಿ: ತಾಲೂಕಿನ ನೆಮ್ಮಾರು ಪಂಚಾಯಿತಿ ವ್ಯಾಪ್ತಿಯ ವಿಶೇಷ ಗ್ರಾಮ ಸಭೆ ಸೋಮವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮದ ಕುಂದುಕೊರತೆ, ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ನಾಳೆ ಮುಜರಾಯಿ ದೇವಸ್ಥಾನ ಸಮಿತಿ ಸದಸ್ಯರ ಸಭೆ
ಕೊಪ್ಪ: ಶೃಂಗೇರಿ ಕ್ಷೇತ್ರದ ಮುಜರಾಯಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸರ್ವ ಸದಸ್ಯರ ಹಾಗೂ ಅರ್ಚಕರ ಸಭೆಯನ್ನು 30 ರ ಮಧ್ಯಾಹ್ನ 2 ಗಂಟೆಗೆ ಶೃಂಗೇರಿ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಕರೆಯಲಾಗಿದೆ. ಸಭೆಯನ್ನು ಮುಜರಾಯಿ ದೇವಸ್ಥಾನದ ಸಮಸ್ಯೆಗಳ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಕರೆದಿದ್ದು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಜಿಲ್ಲಾಧಿಕಾರಿಗಳು ಹಾಜರಿರುತ್ತಾರೆ ಎಂದು ತಾಲೂಕು ಭಾಜಪ ಅಧ್ಯಕ್ಷ ಡಾ. ಮಹಾಬಲ ತಿಳಿಸಿದ್ದಾರೆ.
ಬನಶಂಕರಿ ದೇವಿ ರಥ ನಿರ್ಮಾಣಕ್ಕೆ ಸಹಕಾರ: ಸುರೇಶ್
ತರೀಕೆರೆ: ತಾಲೂಕು ದೇವಾಂಗ ಸಂಘ, ಶ್ರೀ ಬನಶಂಕರಿ ದೇವಸ್ಥಾನ ಸಮಿತಿ ವತಿಯಿಂದ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಅಮ್ಮನವರ ಬನದ ಹುಣ್ಣಿಮೆ ಹಾಗೂ ಚಂಡಿಕಾ ಹೋಮವನ್ನು ಏರ್ಪಡಿಸಲಾಗಿತ್ತು. ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಡಿ.ಎಸ್. ಸುರೇಶ್ ಮಾತನಾಡಿ, ಸಮುದಾಯ ಭವನ ನಿರ್ಮಾಣ ಮಾಡಲು ಮತ್ತು ರಥ ನಿರ್ಮಿಸಲು ತಾವು ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದರು. ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಮಾತನಾಡಿ, ಹೋಮ ಹವನಗಳಿಂದ ಶಾಂತಿ ನೆಲಸುತ್ತದೆ ಎಂದು ಹೇಳಿದರು.
ಸಂಸ್ಕೃತಿ ಮರೆಯಬಾರದು: ಪುರಸಭೆ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿ, ಪೂರ್ವಿಕರ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಮರೆಯಬಾರದು, ತಾಯಂದಿರ ಪಾತ್ರ ಬಹಳ ಮುಖ್ಯವಾಗಿದೆ, ಜ್ಞಾನಾರ್ಜನೆ ನೀಡಬೇಕು. ಪರಿವರ್ತನೆಗಾಗಿ ಮಹಿಳಾ ಶಕ್ತಿ ಬಳಕೆಯಾಗಬೇಕು ಎಂದು ಹೇಳಿದರು.
ಶ್ರೀ ಬನಶಂಕರಿ ದೇವಸ್ಥಾನ ಅಧ್ಯಕ್ಷ ಟಿ.ಎಸ್. ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪುರಸಭಾಧ್ಯಕ್ಷ ನಾಗರಾಜ್ ಮತ್ತಿತರರು ಮಾತನಾಡಿದರು. ಪುರಸಭೆ ಉಪಾಧ್ಯಕ್ಷೆ ಸೀತಮ್ಮ ಸೋಮಶೇಖರ್, ಪಾರ್ವತಮ್ಮ ನಾಗರಾಜ್, ಗಿರಿಜಮ್ಮ ನಾಗರಾಜ್, ಡೆಪ್ಯೂಟಿ ಕಂಟ್ರೋಲರ್ ಬೀರೇಂದ್ರಕುಮಾರ್, ಡಾ.ಬಿ. ನಾಗರಾಜ್ ರಾಮಣ್ಣನವರು, ತಾಲೂಕು ದೇವಾಂಗ ಸಂಘದ ಸದಸ್ಯರು, ದೇವಸ್ಥಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರತಿಭಾ ಪುರಸ್ಕಾರ ಮತ್ತು ಗಣ್ಯರಿಗೆ ಸನ್ಮಾನ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

