ಚಿಕ್ಕಮಗಳೂರು

ತಂತ್ರಜ್ಞಾನ ಅಳವಡಿಸಿಕೊಂಡರೆ ಕೃಷಿ ಲಾಭದಾಯಕ

Published On :

ಕಡೂರು: ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಬದ್ಧತೆಯಿಂದ ವ್ಯವಸಾಯ ಮಾಡಿದರೆ ಕೃಷಿ ಕ್ಷೇತ್ರವು ಅತ್ಯಂತ ಲಾಭದಾಯಕ ಉದ್ಯೋಗವಾಗಲಿದೆ ಎಂದು ಶಾಸಕ ಡಾ ವೈ.ಸಿ. ವಿಶ್ವನಾಥ್ ಹೇಳಿದರು.                                
 ಅವರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕೃಷಿ ಮಾಹಿತಿ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸತ್ತಿರುವುದರಿಂದ ಮುಂದೆ ಆಹಾರದ ಕೊರತೆ ಉಂಟಾಗಲಿರುವುದರ ಕುರಿತು ಜಾಗೃತರಾಗಬೇಕು ಎಂದರು.  
ಸುಧಾರಣೆ ಆಗಿಲ್ಲ: ಎಪಿಎಂಸಿ ಅಧ್ಯಕ್ಷ ಚಿಕ್ಕದೇವನೂರು ರವಿ ಮಾತನಾಡಿ, ಹಲವಾರು ಪಂಚವಾರ್ಷಿಕ ಯೋಜನೆಗಳು ಬಂದು ಹೋಗಿದ್ದರೂ ಕೂಡ ದೇಶದ ರೈತರ ಸ್ಥಿತಿಗತಿಯ ಬಗ್ಗೆ ಇನ್ನೂ ಸುಧಾರಣೆಯಾಗದಿರುವುದು ದುರಂತ ಎಂದರು.
 ಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷಿ ಪಂಡಿತ ಪ್ರಶಸ್ತಿ ವಿಜೇತ ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ, ಕೃಷಿ ಇಲಾಖೆಯ ಸಹಕಾರದಿಂದ ತಾವು ಇಂದು ಈ ಕೃಷಿ ಪ್ರಶಸ್ತಿ ಪಡೆಯಲು ಕಾರಣವಾಗಿದೆ ಎಂದರು.
 ಕೃಷಿ ಪಂಡಿತ ಪ್ರಶಸ್ತಿ ಪಡೆದ ಶೆಟ್ಟಿಹಳ್ಳಿ ಮಲ್ಲಿಕಾರ್ಜುನ್, ಗೌಡನಕಟ್ಟೆಹಳ್ಳಿ ಕೃಷ್ಣಮೂರ್ತಿ,ಸಿಂಗಟಗೆರೆ ನಾರಾಯಣಪುರದ ಎಸ್.ಎಂ.ರೇವಣ್ಣನವರನ್ನು ಕೃಷಿ ಇಲಾಖೆಯಿಂದ ಅಭಿನಂದಿಸಲಾಯಿತು.   
ಜಿಲ್ಲಾ ಪಂಚಾಯ್ತಿಯ ಉಪಾಧ್ಯಕ್ಷೆ ಮಾಲಿನಿಬಾಯಿ ರಾಜನಾಯ್ಕ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು.   ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ನಾಳೆ ಸಂಗೀತ ಸಂಜೆ
ಚಿಕ್ಕಮಗಳೂರು: ತ್ಯಾಗರಾಜರ ಹಾಗೂ ಪುರಂದರದಾಸರ ಜಯಂತ್ಯುತ್ಸವದ ಅಂಗವಾಗಿ ನಗರದ ಎಂಇಎಸ್ ಶಾಲಾ ಆವರಣದಲ್ಲಿ ಫೆ. 1 ರಂದು ಗಾಯಕಿ ಅರ್ಚನ ಉಡುಪ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಯಂತ್ಯುತ್ಸವ ಉಪ ಸಮಿತಿ ಅಧ್ಯಕ್ಷ ಎಸ್. ಶ್ರೀಧರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.