ಚಿಕ್ಕಮಗಳೂರು

ದೇವಾಲಯಗಳ ಅಭಿವೃದ್ಧಿಗೆ ಆರ್ಚಕರ ಪಾತ್ರ ಮಹತ್ತರ

Published On :

ಶೃಂಗೇರಿ: ದೇವಾಲಯಗಳ ಅಭಿವೃದ್ಧಿಯಲ್ಲಿ ಆರ್ಚಕರ ಪಾತ್ರ ಮಹತ್ತರವಾಗಿದೆ ಎಂದು ರಾಜ್ಯ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.
  ಪಟ್ಟಣದ ಆದಿಚುಂಚನಗಿರಿ ಸಭಾಂಗಣದಲ್ಲಿ ನಡೆದ ಶೃಂಗೇರಿ ಕ್ಷೇತ್ರದ ಮುಜರಾಯಿ ದೇವಸ್ಥಾನಗಳ ಆರ್ಚಕರ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಅರ್ಚಕರು ಧಾರ್ಮಿಕ ನೆಲೆಗಟ್ಟಿನ ವಾತಾವರಣದಲ್ಲಿ ಜನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ದೇವಾಲಯಗಳಲ್ಲಿ ಪೂಜೆ: ಕಳೆದ ಬಾರಿ ರಾಜ್ಯದಲ್ಲಿ ಬೀಕರ ಬರಗಾಲ ಉಂಟಾದಾಗ ಮಳೆಗಾಗಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪೂಜೆ ನಡೆಸುವಂತೆ ಆದೇಶ ಹೊರಡಿಸಿದ್ದೆ. ಇದನ್ನು ಬುದ್ದಿ ಜೀವಿಗಳು ಟೀಕೆ ಮಾಡಿದರು. ಆದರೆ ಪೂಜೆಯ ಪರಿಣಾಮ ರಾಜ್ಯದೆಲ್ಲೆಡೆ ಮಳೆ ಬಂದಿತು ಎಂದರು.
ಅವಹೇಳನ: ಕೆಲ ಜಾಹಿರಾತುಗಳಲ್ಲಿ ಹಿಂದೂ ದೇವತೆಗಳ ಅವಹೇಳನವಾಗುತ್ತಿದೆ. ಚಪ್ಪಲಿ, ಪಟಾಕಿ, ಮದ್ಯದ ಬಾಟಲಿಗಳ ಮೇಲೆ ಹಿಂದೂ ದೇವತೆಗಳ ಚಿತ್ರಗಳನ್ನು ಮುದ್ರಿಸಲಾಗುತ್ತಿದೆ. ಇದನ್ನು ಸರ್ಕಾರ ನಿಷೇದಿಸಿದೆ. ಇದು ಕೇಸರಿಕರಣವಲ್ಲ. ನಮ್ಮ ಹಿಂದೂ ಧರ್ಮದ ರಕ್ಷಣೆ. ಹಿರಿಯ ಜೀವಿಗಳಿಗೆ ಇಂದು ಗೌರವ ಸಿಗುತ್ತಿಲ್ಲ ಅವರು ವೃದ್ಧಾಶ್ರಮ ಸೇರುತ್ತಿದ್ದಾರೆ ಎಂದರು.
ಹೊಸ ಪತ್ರಿಕೆ: ಅರ್ಚಕರ ಸಂಭಾವನೆಯನ್ನು ವಾರ್ಷಿಕ 24 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಪ್ರತೀ ಜಿಲ್ಲಾ ಮಟ್ಟದಲ್ಲಿ ಅರ್ಚಕರ ತರಬೇತಿ ಕೇಂದ್ರಗಳನ್ನು ಸ್ಪಾಪಿಸಲಾಗುತ್ತಿದೆ. ಸರ್ಕಾರ ಅರ್ಚಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಮೂಲ ಸೌಕರ್ಯ ಒದಗಿಸುತ್ತಿದೆ. ಮುಜರಾಯಿ ಇಲಾಖೆಯಿಂದ ಹೊಸ ಪತ್ರಿಕೆಯನ್ನು ಹೊರಡಿಸಲಾಗುತ್ತದೆ. ಇದರಲ್ಲಿ ದೇವರು,ಧರ್ಮ, ಹೊಸ ವಿಚಾರಗಳನ್ನು ಪ್ರಕಟಿಸಿ ದೇವಾಲಯಗಳಿಗೆ ತಲುಪಿಸಲಾಗುತ್ತದೆ ಎಂದರು.
 ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್, ತಾಪಂ ಅಧ್ಯಕ್ಷೆ ಶಾರದಾ ವಿಶ್ವನಾಥ್, ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್, ಧಾರ್ಮಿಕ ಪರಿಷತ್ತಿನ ಸದಸ್ಯೆ ಮೋಹಿನಿ, ತರಿಕೆರೆ ಮಂಜುನಾಥ್, ಶಿವಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.