ಬೆಲೆ ಏರಿಕೆ ನೀತಿ ಖಂಡನೀಯ
ಕ.ಪ್ರ.ವಾರ್ತೆ, ಶೃಂಗೇರಿ, ಜು.2
ಕೇಂದ್ರ ಸರ್ಕಾರ ಮತ್ತೆ ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಯುವ ಭಾರತ್ ಸಂಘಟನೆ ಖಂಡಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ ಡೀಸೆಲ್, ಪೆಟ್ರೋಲ್ ದರ ಏರಿಕೆ ಮಾಡಿದ್ದು, ಮತ್ತೆ ಇದೀಗ ದಿಢೀರ್ ಆಗಿ ಬೆಲೆ ಏರಿಕೆ ಮಾಡುವುದರ ಮೂಲಕ ಜನ ವಿರೋಧಿ ನೀತಿ ಅನು ಸರಿಸಿದೆ. ಡೀಸೆಲ್ ದರ ಏರಿಕೆಯಿಂದ ಸಾರಿಗೆ ಸಾಗಣೆ ವೆಚ್ಚವು ಹೆಚ್ಚಳವಾಗುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚುತ್ತದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಜನರ ಹಿತ ಕಾಪಾಡುವ ಬದಲು ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುವುದರೊಂದಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ಸಂಘಟನೆ ಆರೋಪಿಸಿದೆ.
ಕೂಡಲೇ ಬೆಲೆಯೇರಿಕೆ ಕ್ರಮಹಿಂತೆಗೆದುಕೊಳ್ಳಬೇಕೆಂದು ಸಂಘಟನೆಯ ಪ್ರಸನ್ನ ಒತ್ತಾಯಿಸಿದ್ದಾರೆ.
--
ವಿದ್ಯುತ್ ಶಾಕ್: ವ್ಯಕ್ತಿಗೆ ಗಾಯ
ನರಸಿಂಹರಾಜಪುರ: ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಂಬ ಹತ್ತಿ ರಿಪೇರಿ ಮಾಡುತ್ತಿದ್ದಾಗ ಶಶಿಕುಮಾರ್ ಎಂಬ ಯುವಕನು ವಿದ್ಯುತ್ ಶಾಕ್ ತಗಲಿ ಕೆಳಗೆ ಬಿದ್ದು ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ.
ಶನಿವಾರವೇ ಈ ಘಟನೆ ನಡೆದಿದ್ದು ಶಶಿಕುಮಾರನಿಗೆ ಸೊಂಟ, ಕೈಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು ತಕ್ಷಣ ಶಿವಮೊಗ್ಗ ಆಸ್ಪತ್ರೆಗೆ ಸೇರಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಯಿತು. ಈ ಬಗ್ಗೆ ಶಶಿಕುಮಾರ್ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ನಾನು ವಿದ್ಯುತ್ ಗುತ್ತಿಗೆದಾರರ ಜೊತೆ ಕೆಲಸ ಮಾಡುತ್ತಿದ್ದು ಮೆಸ್ಕಾಂ ಇಂಜಿನಿಯರ್ ನಿರ್ಲಕ್ಷ್ಯದಿಂದ ತನ್ನನ್ನು ಕಂಬಕ್ಕೆ ಹತ್ತಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

