ವೈಜ್ಞಾನಿಕ ಕೃಷಿಯಿಂದ ಹೆಚ್ಚು ಲಾಭ
ಕ.ಪ್ರ.ವಾರ್ತೆ, ನ.ರಾ.ಪುರ, ಜು.2
ಕೃಷಿ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಭೂ ಚೇತನ ಯೋಜನೆಯಡಿ ಹೋಬಳಿ ಮಟ್ಟದ ಶ್ರೀ ಪದ್ಧತಿ ಬತ್ತದ ಬೇಸಾಯದ ಬಗ್ಗೆ ಹಾಗೂ 2013-14 ನೇ ಸಾಲಿನ ಒಂದು ದಿನದ ರೈತ ತರಬೇತಿ ಕಾರ್ಯಕ್ರಮ ಮೇಗರಮಕ್ಕಿ ಸಮುದಾಯ ಭವನದಲ್ಲಿ ನಡೆಯಿತು.
ತಾಲೂಕು ಕೃಷಿಕ ಸಮಾಜದ ನಿರ್ದೇಶಕ ಶ್ರೀನಿವಾಸ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿ ಇಲಾಖೆ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ರೈತರು ಹೆಚ್ಚಾಗಿ ಭಾಗವಹಿಸಿ ಇಲಾಖೆಯಿಂದ ಸಿಗುವ ಮಾಹಿತಿಯನ್ನು ಪಡೆಯಬೇಕು. ಕೃಷಿ ಇಲಾಖೆ ಅಧಿಕಾರಿಗಳು ನೀಡುವ ತಾಂತ್ರಿಕ ಮಾಹಿತಿ ಪಡೆದು ವೈಜ್ಞಾನಿಕ ಕೃಷಿ ಮಾಡಿದರೆ ಕೃಷಿಯಿಂದ ಲಾಭಗಳಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಸಹಾಯಕ ಕೃಷಿ ನಿರ್ದೇಶಕ ಎಸ್.ಎಂ. ಲೋಕೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಭೂ ಚೇತನ ಯೋಜನೆಯಡಿ ರೈತರಿಗೆ ಹಲವು ಸೌಲಭ್ಯಗಳಿವೆ. ರೈತ ಕ್ಷೇತ್ರ ಪಾಠಶಾಲೆ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು ರೈತರಿಂದ ಉತ್ತೇಜನ ಪ್ರತಿಕ್ರಿಯೆ ಬರುತ್ತಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಡುವಳ್ಳಿ ಗ್ರಾಪಂ ಸದಸ್ಯ ಚೆನ್ನಪ್ಪ ಮಾತನಾಡಿ, ರೈತರು ಕೃಷಿ ಮಾಡುವಾಗ ಅಧಿಕ ಇಳುವರಿ ಪಡೆಯುವ ಬಗ್ಗೆ ಗಮನ ಹರಿಸದೆ ಭೂಮಿ ಫಲವತ್ತತೆ ಬಗ್ಗೆಯೂ ಗಮನ ನೀಡಬೇಕಾಗಿದೆ ಎಂದರು.
ಧ.ಗ್ರಾ.ಯೋಜನೆಯ ಶ್ರೀನಿಧಿ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಭಾಗ್ಯ ಮಾತನಾಡಿದರು. ಪ್ರೇಮ್ಕುಮಾರ್ ಬತ್ತದ ಬೆಳೆಯಲ್ಲಿ ಶ್ರೀ ಪದ್ಧತಿ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಇಲಾಖೆ ಸಹಾಯಕ ಕೃಷಿ ಅಧಿಕಾರಿ ವಿ.ಎಸ್. ಶಿವಮೂರ್ತಿ, ಮಲೆನಾಡಿನಲ್ಲಿ ಬತ್ತದ ಬೆಳೆಗೆ ಹೆಚ್ಚಾಗಿ ಬೆಂಕಿ ರೋಗ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಪರಿಹಾರವಾಗಿ ಬತ್ತದ ಬೀಜವನ್ನು ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಬೆಂಕಿ ರೋಗ ಹತೋಟಿಗೆ ತರಬಹುದು ಎಂದು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

