ಚಿಕ್ಕಮಗಳೂರು

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published On :

ಕ.ಪ್ರ.ವಾರ್ತೆ, ನರಸಿಂಹರಾಜಪುರ:  ಶಿಶು ಅಭಿವೃದ್ಧಿ ಯೋಜನೆ ವತಿಯಿಂದ 2013-14 ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಪ್ರಕಟಣೆ ತಿಳಿಸಿದೆ.
ಅರ್ಹ ಮಹಿಳೆ ಕೈಗೊಳ್ಳಬೇಕಾದ ಉದ್ಯಮ, ಆದಾಯೋತ್ನನ್ನ ಚಟುವಟಿಕೆ ವೆಚ್ಚ ರು. 1 ಲಕ್ಷ ಮೀರಿರಬಾರದು. ಉದ್ಯಮ, ಚಟುವಟಿಕೆ ಬಗ್ಗೆ ಯೋಜನಾ ವರದಿ ತಯಾರಿಸಬೇಕು. ಅರ್ಜಿದಾರರ ವಯೋವುತಿ 18 ರಿಂದ 45 ವರ್ಷ ಮೀರಿರಬಾರದು. ವಯಸ್ಸಿನ ದೃಢೀಕರಣ ಪತ್ರ ಲಗತ್ತಿಸಿರಬೇಕು.
ಆದಾಯ ಪ್ರಮಾಣ ಪತ್ರ: ಅರ್ಜಿದಾರರ ಆದಾಯ ಮಿತಿ ರು. 40,000 ಕ್ಕಿಂತ ಕಡಿಮೆ ಇರಬೇಕು. ಈ ಬಗ್ಗೆ ತಹಸೀಲ್ದಾರ್ ಅವರಿಂದ ಆದಾಯ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಿರಬೇಕು. ಸಾಲ ಮಂಜೂರಾತಿಗೆ ನಿಯಮಾನುಸಾರ ಆಯ್ಕೆಯಾದ ಮಹಿಳೆಯರ ಉದ್ಯೋಗಿನಿ ಯೋಜನೆ ಅರ್ಜಿಯನ್ನು ಸಂಬಂಧಿಸಿದ ಸೇವಾ ವ್ಯಾಪ್ತಿಯ ರಾಷ್ಟೀಕೃತ, ಪ್ರಾದೇಶಿಕ ಬ್ಯಾಂಕುಗಳಿಗೆ ಕಳಿಸಲಾಗುವುದು.
ಉದ್ಯೋಗಿನಿ ಯೋಜನೆಯಡಿ ಸಾಲ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವ ಮಹಿಳೆಯರು ಇತರೆ ಇಲಾಖೆಗಳಲ್ಲಿ ಸಾಲ ಯೋಜನೆಯಲ್ಲಿ ಸಾಲ ಪಡೆದಿರಬಾರದು.
  ಅರ್ಜಿ ಸಲ್ಲಿಸುವ ಮಹಿಳೆಯರು ತಮ್ಮ ಸೇವಾ ವ್ಯಾಪ್ತಿಯ ಬ್ಯಾಂಕುಗಳಿಂದ ಸಾಲಗಾರರಲ್ಲ ಎಂಬ ಬಗ್ಗೆ ಸಂಬಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರಿಂದ ಪಡೆದ ಎನ್.ಓ.ಸಿ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು.
  ಮೇಲ್ಕಂಡ ಷರತ್ತು ಅನುಗುಣವಾಗಿ ಸಾಲ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಇಚ್ಚೆಯುಳ್ಳ ಮಹಿಳೆಯರು ಉಚಿತ ಅರ್ಜಿ ನಮೂನೆ ಹಾಗೂ ಮಾಹಿತಿಗೆ ನರಸಿಂಹರಾಜಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ  ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.8.2013.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.