ಮತ್ತೆ ಆತ್ಮಹತ್ಯೆಗೆ ಪ್ರಯತ್ನಿಸಿದ ವೈದ್ಯ
ತರೀಕೆರೆ: ಶುಕ್ರವಾರ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ವೈದ್ಯರೊಬ್ಬರು ಪುನಃ ಶನಿವಾರ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶನಿವಾರ ಪಟ್ಟಣದಲ್ಲಿ ನೆಡೆದಿದೆ. ಆಸ್ಪತ್ರೆಯಲ್ಲಿ ಸಹದ್ಯೋಗಿಯೊಂದಿಗೆ ಆಗಾಗ್ಗೆ ನಡೆಯುತ್ತಿದ್ದ ವೈಯಕ್ತಿಕ ಕಲಹದಿಂದ ನೊಂದ ಮೂಳೆ ತಜ್ಞ ಡಾ. ದೇವರಾಜ್ ಶುಕ್ರವಾರ ನ್ಯಾಯಾಧೀಶರಿಗೆ ಪತ್ರ ಬರೆದು, ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ವಿಫಲ ಯತ್ನ ನಡೆಸಿದ್ದರು. ಶುಕ್ರವಾರ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಅವರು ಚಕಿತ್ಸೆ ಪಡೆದು ಆಸ್ಪತ್ರೆಯಿಂದ ಬಂದ ನಂತರ ಮತ್ತೆ ಶನಿವಾರ ಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆ ಬಳಿ ಕಾರಿನಲ್ಲಿ ಬಾಗಿಲು ಹಾಕಿಕೊಂಡು ವಿಷಪೂರಿತ ಚುಚ್ಚುಮದ್ದು ಹಿಡಿದುಕೊಂಡು ತಮ್ಮೊಂದಿಗೆ ಜಗಳವಾಡಿದ ವೈದ್ಯರನ್ನು ಮತ್ತು ವರದಿಗಾರರನನ್ನು ಬಂಧಿಸಬೇಕೆಂದು ಒತ್ತಡ ಹೇರತೊಡಗಿದರೆನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ವೈದ್ಯರ ಮನವೊಲಿಸಲು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕಡೆಗೆ ಸದರಿ ವೈದ್ಯರು ಕಾರನ್ನು ನ್ಯಾಯಾಲಯದ ಕಡೆಗೆ ತೆಗೆದುಕೊಂಡು ಬಂದಾಗ ಪೊಲೀಸರು ಅವರನ್ನು ಹಿಂಬಾಲಿಸಿ, ವೈದ್ಯರ ಕೈಲಿದ್ದ ಚುಚ್ಚುಮದ್ದನ್ನು ಕಸಿದುಕೊಂಡು ತಕ್ಷಣವೇ ವೈದ್ಯರನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್, ಡಿವೈಎಸ್‌ಪಿ ಸದಾನಂದ್ ಬಿ.ನಾಯಕ್, ಉಪವಿಭಾಗಾಧಿಕಾರಿ ಅನುರಾಧ, ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

