ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Published On :

ಅರ್ಜಿ ಆಹ್ವಾನ
ಚಿಕ್ಕಮಗಳೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ಪದವಿಗಳಾದ ಎಂ.ಎ. ಕನ್ನಡ ಹಾಗೂ ಇಂಗ್ಲೀಷ್, ಅರ್ಥಶಾಸ್ತ್ರ, ಇತಿಹಾಸ, ಎಂ.ಕಾಂ., ಎಂ.ಎಸ್ಸಿ. ರಸಾಯನಶಾಸ್ತ್ರ, ಎಂ.ಎಸ್ಸಿ. ಸಸ್ಯಶಾಸ್ತ್ರ, ಎಂ.ಎಸ್ಸಿ. ಅನ್ವಯಿಕ ಪ್ರಾಣಿಶಾಸ್ತ್ರ ತರಗತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜು.17 ಕೊನೆಯದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಐಡಿಎಸ್‌ಜಿ ಸರ್ಕಾರಿ ಕಾಲೇಜು ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪ.ಜಾತಿ: ಆದಾಯ ಮಿತಿ ಹೆಚ್ಚಳ
ಮೆಟ್ರಿಕ್ ನಂತರದ ಕಾಲೇಜು ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ 2 ಲಕ್ಷದಿಂದ 2.50 ಲಕ್ಷಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬಹುದೆಂದು ಸಮಾಜ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಪಾಸಣಾ ಶಿಬಿರ
ಚರ್ಮ ಖಾಯಿಲೆಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣಾ ಶಿಬಿರ ಜು.8 ರಂದು ನಗರದ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆ, ಹೊಸಮನೆ ಬಡಾವಣೆ ಇಲ್ಲಿ ನಡೆಯಲಿದೆ.
ಅವಧಿ ವಿಸ್ತರಣೆ
ಕುವೆಂಪು ವಿಶ್ವವಿದ್ಯಾನಿಲಯ ಪ್ರಸಕ್ತ ಸಾಲಿಗೆ ಸ್ನಾತಕ ಪದವಿ ಪ್ರಥಮ ಸೆಮಿಸ್ಟರ್ ಪ್ರವೇಶ ಪಡೆಯಲು ನಿಗಧಿಪಡಿಸಲಾಗಿದ್ದ ಕೊನೆಯ ದಿನವನ್ನು ಜು.3 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.