ಚಿಕ್ಕಮಗಳೂರು

ಡೆಂಘೀ ನಿಯಂತ್ರಣಕ್ಕೆ ಆಂದೋಲನ ಅಗತ್ಯ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜು.7
ರಾಜ್ಯದಲ್ಲಿ ತಲೆದೋರಿರುವ ಡೆಂಘೀ ಜ್ವರದ ಸಮಸ್ಯೆ ನಿಯಂತ್ರಣಕ್ಕೆ ಸರ್ಕಾರ ಆಂದೋಲನ ಕೈಗೊಳ್ಳುವುದು ಅತ್ಯಗತ್ಯ ಎಂದು ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಉಪ್ಪಳ್ಳಿಯ ಅಂಗಡಿ ಅಬೂಬಕರ್ ಕಾಕ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಲಾದ 50 ಸಾವಿರ ಚೆಕ್ ವಿತರಿಸಿ ಅವರು ಮಾತನಾಡಿದರು.
ಡೆಂಘೀ ಜ್ವರದಿಂದ ಸಾವಪ್ಪಿರುವ ಮೈಸೂರು ಜಿಲ್ಲೆಯವರಿಗೆ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಹಾರ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಗೆ ಮಾತ್ರ ಸೀಮಿತರಾದವರಲ್ಲ. ಅವರು ರಾಜ್ಯಕ್ಕೆ ಸಿ.ಎಂ. ಎಂದು ಅಥ್ಥೈಸಿಕೊಳ್ಳಬೇಕೆಂದ ಶಾಸಕರು, ಕಾಂಗ್ರೆಸ್ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಡೆಂಘೀ ಜ್ವರ ನಿಯಂತ್ರಣ ಅಗತ್ಯ: ಹೋಬಳಿ ಮತ್ತು ತಾಲ್ಲೂಕು ಕೇಂದ್ರದಲ್ಲಿ ಚಿಕಿತ್ಸಾಲಯ ತೆರೆದು ಸೂಕ್ತ ಚಿಕಿತ್ಸೆ ನೀಡುವ ಮೂಲಕ ಡೆಂಘೀ ಜ್ವರ ನಿಯಂತ್ರಣಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.
ಬಡವರ ಮಾರಣಾಂತಿಕ ಖಾಯಿಲೆಗಳಿಗೆ ಉತ್ತಮ ಚಿಕಿತ್ಸೆ ಸಿಗುವುದೇ ದುಸ್ತರವಾಗಿದೆ. ನರ್ಸಿಂಗ್ ಹೋಂಗಳಲ್ಲಿ ದುಬಾರಿ ಬಿಲ್‌ಗಳನ್ನು ಕೊಡಲು ಸಾಧ್ಯವಾಗದೆ ಅಸಹಾಯಕತೆಯಿಂದ ನರಳಿ ಪ್ರಾಣ ಬಿಡುವ ಪರಿಸ್ಥಿತಿ ಎದುರಾಗಿದೆ. ನಾವು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎಷ್ಟೇ ಹಣ ಕೊಡಿಸಿದರೂ ರೋಗಿಗಳಿಗೆ ಖರ್ಚಾಗುವ ಪೂರ್ತಿ ಹಣ ನೀಡಲು ಸಾಧ್ಯವಿಲ್ಲ. ಮಾರಣಾಂತಿಕ ಖಾಯಿಲೆಗಳಾದ ಕ್ಯಾನ್ಸರ್, ಹೃದಯ ಮತ್ತು ಕಿಡ್ನಿ ಸಂಬಂಧಿ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ದೊರಕುವ ವ್ಯವಸ್ಥೆಯಾಗಬೇಕಿದೆ ಎಂದು ತಿಳಿಸಿದರು.
ಮಾನವೀಯತೆ ಇರಲಿ; ಬಿಜೆಪಿ ಸರ್ಕಾರದಲ್ಲಿ ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅನುಷ್ಠಾನಕ್ಕೆ ತಂದಿದ್ದರೂ ಎಲ್ಲರೂ ಇದರ ಫಲಾನುಭವಿಯಾಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಮಾನವೀಯ ನೆಲೆಯಲ್ಲಿ ಯೋಚಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಮಹಮದ್ ಅನ್ವರ್, ಕಾರ್ಯದರ್ಶಿ ಸಿ.ಎ. ದಾವೂದ್, ನಗರಸಭಾ ಸದಸ್ಯ ಅಬ್ದುಲ್ ರೆಹಮಾನ್ ಖುರೇಷಿ, ಮಾಜಿ ಸದಸ್ಯ ಸಗಾಯಿದಾಸ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.