ಪಶ್ಚಿಮಘಟ್ಟದಲ್ಲಿ ಅರಣ್ಯ ಲೂಟಿ
ಚಿಕ್ಕಮಗಳೂರು, ಜು.7
ಪಶ್ಚಿಮಘಟ್ಟದಲ್ಲಿ ಅರಣ್ಯ ಲೂಟಿಯಾಗುತ್ತಿದೆ. ಇದನ್ನು ತಡೆಯುವ ಕೆಲಸ ಸರ್ಕಾರದಿಂದ ಆಗಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್.ಆರ್. ಹಿರೇಮಠ್ ಆಗ್ರಹಿಸಿದ್ದಾರೆ.
ಈ ವಿಷಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತಾಳಿದರೆ ಮುಂದೊಂದು ದಿನ ಪಶ್ಚಿಮಘಟ್ಟಕ್ಕೆ ಗಂಡಾಂತರ ಎದುರಾಗಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
10 ಕೋಟಿ ಬೆಲೆ: ಎನ್.ಆರ್.ಪುರ ತಾಲೂಕಿನ ಸಾಲೂರು ಗ್ರಾಮದ ಸರ್ವೇ ನಂಬರ್ 105ರ ಆಸುಪಾಸಿನಲ್ಲಿರುವ ಸುಮಾರು 20 ಎಕರೆ ಮೀಸಲು ಅರಣ್ಯ ಒತ್ತುವರಿ ಮಾಡಲಾಗಿದ್ದು, ಇಲ್ಲಿದ್ದ ಕಪ್ಪು ಮತ್ತಿಯ ಸುಮಾರು 10 ಕೋಟಿ ಬೆಲೆಯ ಮರಗಳನ್ನು ಕಡಿತಲೆ ಮಾಡಿ ಬೆಂಗಳೂರಿಗೆ ಸಾಗಾಣಿಕೆ ಮಾಡಲಾಗಿದ್ದು, ಈ ಮರಗಳನ್ನು ಮಾಜಿ ಮುಖ್ಯಮಂತ್ರಿಯೋರ್ವರ ಹಾಗೂ ಈ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಮನೆಗಳಿಗೆ ಬಳಸಿಕೊಳ್ಳಲಾಗಿದೆ ಎಂದರು.
ಈ ಸಂಬಂಧ ಸಾಲೂರು ಮತ್ತು ಬಿಳಾಲಕೊಪ್ಪ ಗ್ರಾಮಸ್ಥರು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಸರಿಯಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳಕ್ಕೆ ಆಗಮಿಸಿದ ಎಲ್ಲಾ ಅಧಿಕಾರಿಗಳು ಕಣ್ಣೋರೆಸುವ ತಂತ್ರವನ್ನು ಮಾಡಿದ್ದು, ಇವರ ಮೇಲೆ ಸಣ್ಣಪುಟ್ಟ ಕೇಸುಗಳು ಹಾಕುವ ನೆಪದಲ್ಲಿ ಕಾನೂನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ವಿಚಾರ ಸಾರ್ವಜನಿಕರಿಗೆ ತಿಳಿಯುತ್ತಿದ್ದಂತೆ ಮರಗಳು ಮತ್ತು ಅವುಗಳ ಬುಡಗಳನ್ನು ಸುಟ್ಟು ಹಾಕುವ ಕೆಲಸ ಆಗಿದೆ. ಇದನ್ನು ತಾವು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಕಣ್ಣಾರೆ ಕಂಡಿದ್ದೇನೆ ಎಂದು ಹೇಳಿದರು.
ಪಶ್ಚಿಮಘಟ್ಟದಲ್ಲಿ ದುರಾಶೆಯ ಗಾಳಿ ಬೀಸುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸ ಜರೂರಾಗಿ ಆಗಬೇಕಾಗಿದೆ. ಈ ಸಂಬಂಧ ಆ ಭಾಗದ ಜನರಲ್ಲಿ ಜಾಗೃತಿ ಮೂಡಿಸಲು ತಮ್ಮ ಸಂಘಟನೆ ಉದ್ದೇಶಿಸಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

