ಚಿಕ್ಕಮಗಳೂರು

ರೈತರ ಸಮಸ್ಯೆ ಪರಿಹರಿಸಲು ಆಗ್ರಹ

Published On :

ಕ.ಪ್ರ.ವಾರ್ತೆ, ಕಡೂರು, ಜು. 7
 ರಾಜ್ಯದಲ್ಲಿ ಸಂಕಷ್ಟದಲ್ಲಿರುವ ತೆಂಗು ಮತ್ತು ಅಡಿಕೆ ಬೆಳೆಗಾರರ ಸಮಸ್ಯೆಗೆ ರೈತರ ಮಗನೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರೇ ಪರಿಹಾರಕ್ಕೆ ಕ್ರಮಕ್ಕೆ ಮುಂದಾಗಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.
ಅವರು ಕಡೂರು ವಿಧಾನಸಭಾ ಕ್ಷೇತ್ರದ ವಿವಿಧ ಕಡೆ ಸುಳಿಬಿದ್ದು ಒಣಗಿರುವ ತೆಂಗು ಮತ್ತು ಅಡಿಕೆ ತೋಟಗಳ ಸ್ಥಿತಿಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರೈತರು ಹೀನಾಯ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ರಾಜ್ಯದ ಅನೇಕ ಕಡೆ ಮಳೆಯಿಲ್ಲದೆ ಕೊಳವೆಬಾವಿಗಳಲ್ಲಿ ನೀರಿಲ್ಲದೆ ತೆಂಗು, ಅಡಿಕೆ ತೋಟಗಳನ್ನು ಕಳೆದುಕೊಂಡು ರೈತರು ಬೀದಿಗೆ ಬರುವ ಸ್ಥಿತಿಗೆ ಬಂದಿದ್ದಾರೆ ಎಂದರು.
ಸರ್ಕಾರ ಕ್ರಮ ಕೈಗೊಳ್ಳಲಿ: ಕೇವಲ 50 ಗಿಡ ತೆಂಗಿನ ತೋಟ ಇಟ್ಟುಕೊಂಡವನು ಬೆಳೆ ಬರುತ್ತದೆಂಬ ಆಸೆಯಿಂದ ಎರಡು ಲಕ್ಷ ರೂ.ವರೆಗೆ ಸಾಲ ಮಾಡಿದ್ದಾನೆ. ಮಳೆ ಸಕಾಲಕ್ಕೆ ಬಾರದೆ ಬರಗಾಲ ಆವರಿಸಿ ರೈತರು ಆತ್ಮಹತ್ಯೆಯತ್ತ ಮುಖ ಮಾಡುತ್ತಿರುವ ಸ್ಥಿತಿ ನಿರ್ಮಾಣವಾಗುತ್ತಿದೆ. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೂ ಕೂಡ ರೈತರ ಮಗನೇ ಆಗಿರುವುದರಿಂದ ರೈತರ ಸಮಸ್ಯೆ ಬಗ್ಗೆ ಗಮನಹರಿಸಿ ಅವರ ಸಂಕಷ್ಟ ಸ್ಪಂದಿಸಿ ಪರಿಹಾರಕ್ಕೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ವೈ.ಎಸ್.ವಿ. ದತ್ತ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಸಂಜಯ್, ಕೆ.ಎಂ. ಮಹೇಶ್ವರಪ್ಪ, ಹರೀಶ್, ರೇಣುಕಯ್ಯ, ನೀಲಂಕಠಪ್ಪ, ತಮ್ಮಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.