ಚಿಕ್ಕಮಗಳೂರು

ದಾನಗಳಲ್ಲಿ ವಿದ್ಯಾದಾನ ಶ್ರೇಷ್ಠವಾದುದು: ಚಂದ್ರೇಗೌಡ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು,  ಜು.9
ದಾನಗಳಲ್ಲಿ ವಿದ್ಯಾದಾನ ಶ್ರೇಷ್ಠವಾಗಿದ್ದು, ಅದರಲ್ಲೂ ಅಸಹಾಯಕರು ಮತ್ತು ಆಸಕ್ತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೀಡುವ ಸಹಕಾರವೇ ಮುಖ್ಯವಾದದ್ದು ಎಂದು ವಿನಾಯಕ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಿ.ಕೆ. ಚಂದ್ರೇಗೌಡ ಹೇಳಿದ್ದಾರೆ.
ಇತ್ತೀಚೆಗೆ ಕಳಸಾಪುರದ ಶ್ರೀ ವಿನಾಯಕ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಕೆ.ಪಿ. ದಾನಕುಮಾರ್ ಅವರ ತಾಯಿ ರಾಧಮ್ಮ 8ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಿದ ಉಚಿತ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು, ದಾನಿಗಳಿಂದ ದೊರೆತ ಸಹಾಯ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಈ ರೀತಿ ಪಡೆದ ಸಹಾಯವನ್ನು ಸದುಪಯೋಗಪಡಿಸಿಕೂಂಡು ಜೀವನದಲ್ಲಿ ಯಶಸ್ಸು ಪಡೆಯಬೇಕು ಎಂದರು.
ಶಾಲಾ ಆಡಳಿತ ಮಂಡಳಿ ಸದಸ್ಯ ಕೆ.ಎನ್. ಚಂದ್ರಮೌಳಿ ಮಾತನಾಡಿ, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳು ನೀಡುತ್ತಿರುವ ಕೊಡುಗೆ ಅದ್ಭುತ ಎಂದರು.
ಪ್ರತಿ ವರ್ಷ ಉಚಿತ ಸಮವಸ್ತ್ರ ಮತ್ತು ನೋಟ್ ಪುಸ್ತಕಗಳನ್ನು ನೀಡುವುದರ ಜೊತೆಗೆ ಶಾಲಾ ಕಟ್ಟಡ ನಿರ್ಮಾಣಕ್ಕೆ ಸಹಕಾರಿಯಾಗುತ್ತಿರುವ ಇವರ ಕೆಲಸ ಶ್ಲಾಘನೀಯ ಎಂದು ಹೇಳಿದರು.
ನಿವೃತ್ತ ಶಿಕ್ಷಕ ನಾರಾಯಣರಾವ್ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಶುಭ ಹಾರೈಸಿದರು. ಕೆ.ಎಂ. ಗಣೇಶ್ ಕುಮಾರ್, ಎ.ಜಿ. ರೇವಣ್ಣ, ಶಿಕ್ಷಕ ಕೆ.ಟಿ. ಶಿವಶಂಕರ್ ಉಪಸ್ಥಿತರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.