ಚಿಕ್ಕಮಗಳೂರು

ಸಂಘ ಸಂಸ್ಥೆ ಜನಮನ ಗೆಲ್ಲಲಿ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಜು.9
ಸಂಘ ಸಂಸ್ಥೆ ಒಡನಾಟದಿಂದ ಜೀವನಾನುಭವ ಪಡೆದು ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳುವುದು ಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಸಮಾಜ ಸೇವೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಜನರ ಮನ ಗೆಲ್ಲಬೇಕು ಎಂದು ರೋಟರಿ ಉಪ ರಾಜ್ಯಪಾಲ ಬಿ.ಎನ್. ರಮೇಶ್ ಅಭಿಪ್ರಾಯಪಟ್ಟರು.
ತಾಲೂಕಿನ ಜನ್ನಾಪುರ ವರ್ತಕರ ಸಮುದಾಯ ಭವನದಲ್ಲಿ ಗೋಣೀಬೀಡು ರೋಟರಿ ಕ್ಲಬ್ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ರೋಟರಿ ಜಿಲ್ಲೆ 3180 ಜೋನ್ 9ರ ವಲಯಾಧಿಕಾರಿ ಶ್ರೀಕಾಂತ್ ಶೆಟ್ಟಿ ಮಾತನಾಡಿ, ಜೀವನದಲ್ಲಿ ಸಮಾಜದ ಋಣ ತೀರಿಸುವ ಗುರುತರ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ, ಅದರಲ್ಲೂ ಯುವಕರ ಮೇಲಿದೆ ಎಂದು ತಿಳಿಸಿದರು.
ವಿಶೇಷ ಕಾರ್ಯಕ್ರಮ: ರೋಟರಿ ಕ್ಲಬ್ ಪೊಲೀಯೋ ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದು, ರಾಷ್ಟ್ರಾದ್ಯಂತ ಪೊಲೀಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ.  ಶಿಕ್ಷಣ, ಆರೋಗ್ಯ, ಸಾಧಕರನ್ನು ಗುರ್ತಿಸಿ ಅವರನ್ನು ಅಭಿನಂದಿಸುವುದರ ಮೂಲಕ ಹತ್ತು ಹಲವು ಉಪಯುಕ್ತ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ನಿರ್ಗಮಿತ ಅಧ್ಯಕ್ಷ ಕೆ.ಆರ್. ಸುಧೀರ್ ಮಾತನಾಡಿ, ಗೋಣಿಬೀಡು ರೋಟರಿ ಸಂಸ್ಥೆ 1995ರಲ್ಲಿ ಪ್ರಾಂರಂಭಗೊಂಡು, ಶೈಕ್ಷಣಿಕ, ಆರೋಗ್ಯಕ್ಕೆ ಆದ್ಯತೆ ನೀಡಿದ್ದು. ಗ್ರಾಮೀಣ ರೈರಿಗೆ ಅನುಕೂಲವಾಗಲೆಂದು ಪಶು ಚಿಕಿತ್ಸಕ ಸೇರಿದಂತೆ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಂಡು ಬಂದಿದೆ ಎಂದರು.
ಮೂಡಿಗೆರೆ ರೋಟರಿ ಮಾಜಿ ಅಧ್ಯಕ್ಷ ಬಿ.ಆರ್. ಯತೀಶ್, ಗೋಣಿಬೀಡು ರೋಟರಿ ಕಾರ್ಯದರ್ಶಿ ಯು.ವಿ.ಪ್ರಕಾಶ್, ಜೆ.ಎಸ್. ರಘು ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.