ಯುವತಿಯ ಮಾನಭಂಗ: ಐದು ಮಂದಿ ಬಂಧನ
ಕಡೂರು: ಯುವತಿಯೋಬ್ಬಳ ಮೇಲೆ ಮಾನಭಂಗ ಪ್ರಕರಣಕ್ಕೆ ಸಂಭಂದಿಸಿದಂತೆ ಐವರನ್ನು ಬಂಧಿಸಿದ್ದು ಅವರನ್ನು ನ್ಯಾಯಾಲಯಕ್ಕೆಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರವಿಕುಮಾರ್ ಎಚ್.ನಾಯಕ್ ತಿಳಿಸಿದ್ದಾರೆ.
ಅವರು ಗುರುವಾರ ಕಡೂರು ಪೋಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕಳೆದ ಎರಡು ತಿಂಗಳ ಹಿಂದೆ ಕೆರೆಸಂತೆಯ 17 ವರ್ಷದ ಯುವತಿಯೊಬ್ಬಳನ್ನು ಅದೇ ಗ್ರಾಮದ ಸುತ್ತಮುತ್ತಲ ಹಳ್ಳಿಯ ಆರು ಯುವಕರು ಹಳ್ಳದ ನಾಲೆಗೆ ಕರೆದೊಯ್ದು ಮಾನಭಂಗ ಮಾಡಿರುವುದಾಗಿ ಯುವತಿ ನೀಡಿದ ದೂರಿನ ಅನ್ವಯ ಆರು ಆರೋಪಿಗಳಲ್ಲಿ ಐವರನ್ನು ಬಂಧಿಸಲಾಗಿದೆ. ತಪ್ಪಿಸಿಕೊಂಡಿರುವ ಮತ್ತೋಬ್ಬ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಹೇಳಿದರು.
ಯುವತಿಯ ದೂರು: ಅತ್ಯಾಚಾರಕ್ಕೆ ಒಳಪಟ್ಟಿರುವ ಯುವತಿ ಹಾಗು ಮಾನಭಂಗ ಮಾಡಿದ್ದಾರೆ ಎನ್ನಲಾದ ಯುವಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ ಅವರು, ಪ್ರಕರಣದ ತನಿಖೆಗೆ ತೊಂದರೆಯಾಗುವುದೆಂಬ ಹಿನ್ನೆಲೆಯಲ್ಲಿ ಆರೋಪಿಗಳ ಹೆಸರನ್ನು ಬರಂಗಪಡಿಸುತ್ತಿಲ್ಲ ಎಂದರು.
ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವುದಾಗಿ ಹೇಳಿದ ಅವರು, ಪ್ರಕರಣದ ತನಿಖೆ ನಡೆಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ತರೀಕೆರೆ ಡಿವೈಎಸ್ಪಿ ಸದಾನಂದಾಯಕ್, ವೃತ್ತ ನೀರೀಕ್ಷಕ ಬಾಲಚಂದ್ರೇಗೌಡ, ಪಿಎಸ್ ಐ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

