ಚಿಕ್ಕಮಗಳೂರು

ಶಾಸಕರಿಗೆ ಅಭಿನಂದನೆ

Published On :

ಬೀರೂರು: ಗುರು ತಪ್ಪು ಮಾಡಿದರೆ ಇಡೀ ಸಮಾಜವೇ ಹಾಳಾಗುತ್ತದೆ. ಆದ್ದರಿಂದ ಗುರುವಿಗಿಂತ ದೊಡ್ಡವರಿಲ್ಲ ಎಂದು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದರು.
 ಪಟ್ಟಣದ ಪತ್ರೆ ಕೆ. ಚನ್ನವೀರಪ್ಪಯ್ಯ ಕಲ್ಯಾಣ ಮಂದಿರದಲ್ಲಿ ಬೀರೂರು ಶೈಕ್ಷಣಿಕ ವಲಯದ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಿಕ್ಷಕರು ಒಳ್ಳೆಯ ಪ್ರಜೆಗಳನ್ನು ನಿರ್ಮಾಣ ಮಾಡಿದಲ್ಲಿ ದೇಶದ ಅಭಿವೃದ್ಧಿಗೆ ದುಡಿಯುತ್ತಾರೆ. ಶಿಕ್ಷಕರು ಸಮಾಜವನ್ನು ತಿದ್ದುವಂತವರಾಗಬೇಕು ಎಂದರು.
 ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ದೇವರಾಜು, ಅಜ್ಞಾನವೆಂಬ ಅಂಧಕಾರ ಓಡಿಸಿ ಬೆಳಕು ಕೊಡುವವರೇ ಗುರು. ಶಿಕ್ಷಕರು ಒಳ್ಳೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಚಿಕ್ಕಮಗಳೂರು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ರಾಜಪ್ಪ ಮಾತನಾಡಿ, ಜಿಲ್ಲೆಯನ್ನು ಶೈಕ್ಷಣಿಕವಾಗಿ ಕೊಂಡೊಯ್ಯುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು ಎಂದರು.
 ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನಕುಮಾರ್, ಕೆ.ಎಂ. ಮಹೇಶ್ವರಪ್ಪ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಟಿ. ರಾಜಪ್ಪ ವಹಿಸಿದ್ದರು. ಬೀರೂರು ಸಮನ್ವಯಾಧಿಕಾರಿ ಪ್ರಕಾಶ್, ಶಿಕ್ಷಣ ಸಂಯೋಜಕ ಮಹೇಂದ್ರ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ. ಮಲ್ಲಪ್ಪ, ಎಚ್. ರಂಗಸ್ವಾಮಿ, ತಿಪ್ಪೇಶ್, ಎಂ. ವಿಶ್ವನಾಥ್, ಜಿ.ಕೆ. ಕೃಷ್ಣಮೂರ್ತಿ, ಅಜಯ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.