ಸಿಇಒ ಆಯ್ಕೆ ಪ್ರಕ್ರಿಯೆ ನಡೆಸಲು ಆಗ್ರಹ
ಕ.ಪ್ರ.ವಾರ್ತೆ ಮೂಡಿಗೆರೆ ಜು.13 ತಾಲೂಕಿನ ದಾರದಹಳ್ಳಿಯಲ್ಲಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಅರ್ಜಿ ಕರೆದು ಒಂದು ವರ್ಷ ಕಳೆದಿದ್ದರೂ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆ ನಡೆಸದೆ ಅಭ್ಯರ್ಥಿಗಳಿಗೆ ಹಣವನ್ನೂ ಹಿಂದಿರುಗಿಸಿಲ್ಲ ಎಂದು ಅಭ್ಯರ್ಥಿ ಸಂತೋಷ್ ಹಂಡುಗುಳಿ ಆಪಾದಿಸಿದ್ದಾರೆ.
ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿ, 2012ರ ಜೂ.26ರಿಂದ ಜು.11ಒಳಗಾಗಿ ಅರ್ಜಿ ಸಲ್ಲಿಕೆಗೆ ಕೊನೆ ದಿನ ಎಂದು ನಿಗದಿಪಡಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿ ಅಭ್ಯರ್ಥಿಯಿಂದ ತಲಾ ರು. 2000 ರಂತೆ ಅರ್ಜಿ ಶುಲ್ಕ ಸಂಗ್ರಹಿಸಿದ್ದಾರೆ ಎಂದವರು ತಿಳಿಸಿದ್ದಾರೆ.
ಕಾನೂನು ಹೋರಾಟ: ಸಾವಿರಾರು ಅಭ್ಯರ್ಥಿಗಳ ಹಣ ದುರುಪಯೋಗಪಡಿಸಿಕೊಂಡಿದ್ದು, ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಹಕಾರ ಸಂಘಗಳ ಜಿಲ್ಲಾ ಉಪನಿಬಂಧಕರು, ಸಹಾಯಕ ನಿಬಂಧಕರು ಹಾಗೂ ಜಿಲ್ಲಾ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಯದಿದ್ದಲ್ಲಿ ಕಾನೂನು ರೀತ್ಯಾ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಕಳೆದ 2012ರಲ್ಲಿ ದಾರದಹಳ್ಳಿ ಗ್ರಾಮದಲ್ಲಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೆದಿರುವ ಹುದ್ದೆಗೆ ಶೀಘ್ರವೇ ಆಯ್ಕೆ ಪ್ರಕ್ರಿಯೆ ನಡೆಸಬೇಕು ಎಂದು ಹಿಂದು ಜಾಗರಣಾ ವೇದಿಕೆ ತಾಲೂಕು ಅಧ್ಯಕ್ಷ ಹುಲ್ಲೇಮನೆ ಚಂದ್ರು ಒತ್ತಾಯಿಸಿದ್ದಾರೆ.
ಈ ಕುರಿತು ಶನಿವಾರ ಹೇಳಿಕೆ ನೀಡಿ, ಹುದ್ದೆಗೆ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಆಯ್ಕೆ ಮಾಡುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಹಿರಿಯ ಅಧಿಕಾರಿಗಳು ಎಚ್ಚರವಹಿಸಬೇಕು.
ಇದೇ ಜು.15ರಂದು ನಡೆಯಲಿರುವ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಈ ವಿಷಯವನ್ನು ಪ್ರಮುಖ ವಿಷಯವಾಗಿ ಪರಿಗಣಿಸಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸಿ, ಅಭ್ಯರ್ಥಿಗಳನ್ನು ವಂಚಿಸಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

