ಚಿಕ್ಕಮಗಳೂರು

ರೈತರಿಗೆ ಸಸಿಗಳ ವಿತರಣೆ

Published On :

ತರೀಕೆರೆ: ನಬಾರ್ಡ್ ಜಲಾನಯನ ಅಭಿವೃದ್ಧಿ ಇಲಾಖೆ, ವಿಕಸನ ಸಂಸ್ಥೆ ವತಿಯಿಂದ ಸಮೀಪದ ಬೇಗೂರು ಗ್ರಾಮದಲ್ಲಿ ರೈತ ಫಲಾನುಭವಿಗಳಿಗೆ ತೋಟಗಾರಿಕೆ ಗಿಡಗಳು ಮತ್ತು ನರ್ಸರಿ ಸಸಿಗಳ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ನಿಸರ್ಗ ಜಲಾನಯನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಸ್. ಲಿಂಗರಾಜಪ್ಪ ಮಾತನಾಡಿ, ಬೇಗೂರು ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ 18,256 ನರ್ಸರಿ ಗಿಡ ಮತ್ತು 2224 ನರ್ಸರಿ ಗಿಡಗಳನ್ನು ನೀಡಲಾಗುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಗಿಡಗಳನ್ನು ಬೇಸಿಗೆ ಕಾಲದಲ್ಲಿ ಸಂರಕ್ಷಣೆ ಮಾಡುವುದು ಒಳ್ಳೆಯದೆಂದು ತಿಳಿಸಿದರು.
ಸದುಪಯೋಗವಾಗಲಿ: ಗ್ರಾಪಂ ಸದಸ್ಯ ಬಿ.ವಿ. ರಂಗಪ್ಪ ಮಾತನಾಡಿ, ವಿಕಸನ ಸಂಸ್ಥೆಯು ಜಲಾನಯನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಪರಿಸರದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ, ಆದುದರಿಂದ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಆಂಜನೇಯಸ್ವಾಮಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ವಿ. ಜಗನ್ನಾಥ್ ಪಾಲ್ಗೊಂಡಿದ್ದರು. ಬಿ.ಎಸ್. ಕುಮಾರಪ್ಪ ಸ್ವಾಗತಿಸಿದರು. ಮಾದಪ್ಪ ನಿರೂಪಿಸಿದರು. ಓಂಕಾರಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.